ಉಡುಪಿ: ಮಾದಕ ದ್ರವ್ಯ ಸೇವನೆ ಮತ್ತು ಮಾರಾಟ ವಿಚಾರದಲ್ಲಿ ಗೃಹ ಸಚಿವ ಬೊಮ್ಮಾಯಿ ಕಟುವಾದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಡ್ರಗ್ ಜಾಲ ಮಟ್ಟ ಹಾಕಲು ಕಠಿಣಕ್ರಮ ಕೈಗೊಳ್ಳಲಾಗಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ - ಉಡುಪಿ ಸುದ್ದಿ
ರಾಜ್ಯದ ಎಲ್ಲಾ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ. ಎಂತಹ ಕಠಿಣ ಪರಿಸ್ಥಿತಿ ಎದುರಾದರೂ ಪರವಾಗಿಲ್ಲ. ಡ್ರಗ್ ಜಾಲವನ್ನು ಮಟ್ಟ ಹಾಕುತ್ತೇವೆ. ಈ ಬಗ್ಗೆ ರಾಜ್ಯ ಸರ್ಕಾರ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
![ಡ್ರಗ್ ಜಾಲ ಮಟ್ಟ ಹಾಕಲು ಕಠಿಣಕ್ರಮ ಕೈಗೊಳ್ಳಲಾಗಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ Minister Kota Srinivasa Poojary Statement About Drug Mafia](https://etvbharatimages.akamaized.net/etvbharat/prod-images/768-512-8628687-209-8628687-1598881334588.jpg)
ಡ್ರಗ್ ಜಾಲ ಮಟ್ಟ ಹಾಕಲು ಕಠಿಣಕ್ರಮ ಕೈಗೊಳ್ಳಲಾಗಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಡ್ರಗ್ ಜಾಲ ಮಟ್ಟ ಹಾಕಲು ಕಠಿಣಕ್ರಮ ಕೈಗೊಳ್ಳಲಾಗಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಈ ಕರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ. ಎಂತಹ ಕಠಿಣ ಪರಿಸ್ಥಿತಿ ಎದುರಾದರೂ ಪರವಾಗಿಲ್ಲ. ಡ್ರಗ್ ಜಾಲವನ್ನು ಮಟ್ಟ ಹಾಕುತ್ತೇವೆ. ಈ ಬಗ್ಗೆ ರಾಜ್ಯ ಸರ್ಕಾರ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ. ಇಲ್ಲಿ ಆ ವುಡ್, ಈ ವುಡ್ ಎಂಬ ಪ್ರಶ್ನೆ ಬರುವುದಿಲ್ಲ. ಗೃಹ ಸಚಿವರ ಕಠಿಣ ನಿರ್ಧಾರವನ್ನ ಇಡೀ ಮಂತ್ರಿಮಂಡಲ ಬೆಂಬಲಿಸುತ್ತದೆ.
ಡ್ರಗ್ಸ್ ವಿಚಾರದಲ್ಲಿ ಸಣ್ಣವರು-ದೊಡ್ಡವರು ಎಂಬ ಪ್ರಶ್ನೆ ಬರುವುದಿಲ್ಲ. ರಾಜ್ಯ ಬಿಜೆಪಿ ಸರ್ಕಾರ ವಿಷಯಗಳ ಮೇಲೆ ಹೋಗುತ್ತದೆಯೇ ಹೊರತು, ವ್ಯಕ್ತಿಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದರು.