ಕರ್ನಾಟಕ

karnataka

ETV Bharat / state

ಮಂಗಳವಾರದಿಂದ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಸೇವೆ ಆರಂಭ: ಸಚಿವ ಕೋಟ ಶ್ರೀನಿವಾಸ ಪೂಜಾರಿ - Udupi News

ಮಂಗಳವಾರದಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೇವೆ ಆರಂಭಗೊಳ್ಳಲಿದೆ. ಆದರೆ, ಅನ್ನದಾಸೋಹ ಮತ್ತು ಸಮಾರಂಭಗಳಿಗೆ ಅವಕಾಶವಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Minister Kota Srinivasa Poojary  Statement
ನಾಳೆಯಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೇವೆ ಆರಂಭ:ಸಚಿವ ಕೋಟ ಶ್ರೀನಿವಾಸ ಪೂಜಾರಿ

By

Published : Aug 31, 2020, 10:09 PM IST

ಉಡುಪಿ: ಮಂಗಳವಾರದಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೇವೆ ಆರಂಭಗೊಳ್ಳಲಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನ್ನದಾಸೋಹ ಮತ್ತು ಸಮಾರಂಭಗಳಿಗೆ ಅವಕಾಶವಿಲ್ಲ. ಸೇವೆ ಆರಂಭಿಸಲು ಅನುಮತಿ ಕೋರಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ್ದೇವೆ. ಸೆಪ್ಟಂಬರ್ 1 ರಿಂದ ಸೇವೆ ಆರಂಭ ಮಾಡಬೇಕು ಎಂಬುದು ನಮ್ಮ ಗುರಿ. ಈ ಕುರಿತಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಜೊತೆ ಮಾತನಾಡಿದ್ದೇವೆ. ಒಳಾಂಗಣದ ಎಲ್ಲಾ ಸೇವೆ ಆರಂಭ ಮಾಡಿ ಎಂದು ಮನವಿ ಮಾಡಿದ್ದೇವೆ ಎಂದರು.

ಚಿನ್ನದ ರಥ ಸೇವೆ, ಬೆಳ್ಳಿರಥ ಸೇವೆ ಹೇಗೆ ಎಂಬ ಬಗ್ಗೆ ಚಿಂತನೆ ನಡೆಸುತ್ತೇವೆ. ಕೋವಿಡ್-19 ಗೈಡ್​​ಲೈನ್ಸ್​ ಪ್ರಕಾರ ನಮ್ಮ ಧಾರ್ಮಿಕ ಸೇವೆ ಆರಂಭವಾಗುತ್ತದೆ. ಆದರೆ ಸಾವಿರಾರು ಜನರು ಒಟ್ಟಿಗೆ ಸೇರುವಂತಿಲ್ಲ. 10 ರಿಂದ 15 ಜನರು ಧಾರ್ಮಿಕ ಸೇವೆ ನಡೆಸುವಂತಹ ಚಿಂತನೆ ನಡೆಸುತ್ತೇವೆ. ಕೋವಿಡ್ ನಿಯಮದ ಮಿತಿಯ ಒಳಗೆ ಎಲ್ಲಾ ಸೇವೆಗಳು ಇರುತ್ತವೆ ಎಂದು ಸಚಿವರು ಸ್ಪಷ್ಟಪಡಿಸಿದರು.

ABOUT THE AUTHOR

...view details