ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೆಳ್ಳಂಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ 16 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಮಲ್ಪೆ ಬಂದರಿನಲ್ಲಿ ಮೀನು ಆಯುವ ಕೆಲಸ ಮಾಡುತ್ತಿದ್ದ ಮಕ್ಕಳನ್ನು ಬೆಳಗ್ಗಿನ ಜಾವ 4.30 ಗಂಟೆಗೆ ನಡೆದ ಕಾರ್ಯಾಚರಣೆಯಲ್ಲಿ ರಕ್ಷಣೆ ಮಾಡಲಾಗಿದೆ. ಅಧಿಕಾರಿಗಳಿಂದ 16 ಅಪ್ರಾಪ್ತ ಮಂದಿ ಮೀನು ಆಯುವ ಮಕ್ಕಳ ರಕ್ಷಣೆ ಮಾಡಲಾಗಿದೆ.
ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ 16 ಮಕ್ಕಳ ರಕ್ಷಣೆ
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ 16 ಅಪ್ರಾಪ್ತ ಮಂದಿ ಮೀನು ಆಯುವ ಮಕ್ಕಳ ರಕ್ಷಣೆ ಮಾಡಲಾಗಿದೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ 16 ಅಪ್ರಾಪ್ತ ಮಕ್ಕಳ ರಕ್ಷಣೆ
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಉಡುಪಿ ಮಹಿಳಾ ಮತ್ತು ಮಕ್ಕಳ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರ ಸಭೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸಂಯುಕ್ತ ಕಾರ್ಯಾಚರಣೆಯಲ್ಲಿ ಕೊಪ್ಪಳ ಮತ್ತು ದಾವಣಗೆರೆ ಮೂಲದ 11 ಬಾಲಕಿಯರು 5 ಬಾಲಕರು ಸೇರಿ 16 ಮಂದಿ ರಕ್ಷಣೆ ಮಾಡಲಾಗಿದೆ. ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ನಿಟ್ಟೂರು ಇವರ ವಶಕ್ಕೆ ಹಸ್ತಾಂತರ ಮಾಡಲಾಗಿದೆ.
ಓದಿ:ರಸ್ತೆ ಬದಿಗಳಲ್ಲಿ ಕೆಲಸ ಮಾಡುವ ಮಕ್ಕಳ ಕಲ್ಯಾಣಕ್ಕಾಗಿ ಮತ್ತೊಮ್ಮೆ ಸಭೆ ಮಾಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
Last Updated : Nov 3, 2022, 9:41 PM IST