ಕರ್ನಾಟಕ

karnataka

ETV Bharat / state

ಬಿಎಸ್​​ವೈ ಶರಶಯ್ಯೆಯಲ್ಲಿ ಮಲಗಿದ್ದಾರೆ: ಬಿ.ಕೆ.ಹರಿಪ್ರಸಾದ್ ಟೀಕೆ - ಶಿರಾ ಉಪಚುನಾವಣೆ

ಬಿಜೆಪಿಯವರು ಯಡಿಯೂರಪ್ಪ ಅವರನ್ನು ಶರಶಯ್ಯೆಯಲ್ಲಿ ಮಲಗಿಸಿದ್ದಾರೆ. ಬಿಎಸ್​​​ವೈ ಅವರು ಭೀಷ್ಮಾಚಾರ್ಯ ಅವರಂತಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

mlc hariprasad
ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್

By

Published : Oct 15, 2020, 7:37 PM IST

ಉಡುಪಿ:ಕಾಂಗ್ರೆಸ್​​ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಶಿರಾದಲ್ಲಿ ಬಿಜೆಪಿಗೆ ಅಭ್ಯರ್ಥಿಯೇ ಇರಲಿಲ್ಲ. ಕಾಂಗ್ರೆಸ್​​​ನಿಂದ ಅರ್ಜಿ ಸಲ್ಲಿಸಿದವರನ್ನು ಕರೆದುಕೊಂಡು ಹೋಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್

ಶಿರಾ ಉಪ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನು ಶರಶಯ್ಯೆಯಲ್ಲಿ ಮಲಗಿಸಿದ್ದಾರೆ. ಬಿಎಸ್​​​ವೈ ಅವರು ಭೀಷ್ಮಾಚಾರ್ಯ ಅವರಂತಾಗಿದ್ದಾರೆ. ಚುನಾವಣೆ ಮುಗಿದ ಬಳಿಕ ಅವರು ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ABOUT THE AUTHOR

...view details