ಉಡುಪಿ:ವಿಜಯೇಂದ್ರ ದೆಹಲಿಗೆ ಹೋಗಿದ್ದು ವೈಯಕ್ತಿಕ ಕೆಲಸದ ಮೇಲೆ. ಅವರ ದೆಹಲಿ ಪ್ರವಾಸದ ಬಗ್ಗೆ ಎದ್ದಿರುವ ಚರ್ಚೆಗಳು ಊಹಾಪೋಹ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಉಪಾಧ್ಯಕ್ಷರಾದವರು ಹಿರಿಯರನ್ನು ಭೇಟಿ ಮಾಡುವುದು ಸಹಜ. ಬಿಜೆಪಿ ಪಕ್ಷ ನಮ್ಮ ತಂದೆಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆ. ನನ್ನನ್ನು ಎಂಪಿ, ಸಹೋದರರನ್ನು ಉಪಾಧ್ಯಕ್ಷರಾಗಿ ಮಾಡಿದೆ. ವಿಜಯೇಂದ್ರ ಅವರನ್ನು ಡಿಸಿಎಂ, ರಾಜ್ಯಾಧ್ಯಕ್ಷ ಮಾಡುತ್ತಾರೆಂಬುದು ತಪ್ಪು ಕಲ್ಪನೆ. ಕೊನೆಯುಸಿರು ಇರುವ ತನಕ ಪಕ್ಷದಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ. ಪಕ್ಷದಲ್ಲಿ ಅವರದ್ದೇ ಆದ ಸಾಮರ್ಥ್ಯ ಇರುತ್ತದೆ. ಯಾರನ್ನು ಗುರುತಿಸಬೇಕು ಎಂದು ಪಕ್ಷಕ್ಕೆ ಗೊತ್ತಿದೆ. ಈ ಚೌಕಟ್ಟಿನಲ್ಲಿ ಸಿಎಂ ಮಾತನಾಡಿದ್ದಾರೆ. ಸಿಎಂ ಮಾತಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.