ಉಡುಪಿ: ವಿದ್ಯುತ್ ಸಂಪರ್ಕವಿಲ್ಲದೆ ಸಮಸ್ಯೆಯಲ್ಲಿದ್ದ ಕುಟುಂಬವೊಂದಕ್ಕೆ ನವ ದಂಪತಿಯೊಂದು ವಿದ್ಯುತ್ ಸಂಪರ್ಕ ಕಲ್ಪಿಸಿ ಮಾನವೀಯತೆ ಮೆರೆದಿದೆ.
30 ವರ್ಷಗಳಿಂದ ವಿದ್ಯುತ್ ಇಲ್ಲದ ಮನೆಗೆ ಬೆಳಕಾದ ನವ ಜೋಡಿ
ಉಡುಪಿ ಕನ್ನರ್ಪಾಡಿ ನಿವಾಸಿ ಶರಣ್ ಶೆಟ್ಟಿ ಮತ್ತು ನವ್ಯ ಶೆಟ್ಟಿ ನವದಂಪತಿ, ಕಳೆದ 30 ವರ್ಷಗಳಿಂದ ವಿದ್ಯುತ್ ಸಂಪರ್ಕ ಇಲ್ಲದೇ ಪರದಾಡುತ್ತಿದ್ದ ಇಲ್ಲಿನ ಲೀಲಾ ಎಂಬುವರ ಮನೆಗೆ ವಿದ್ಯುತ್ ಸಂಪರ್ಕವನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.
ವಿದ್ಯುತ್ ಸಂಪರ್ಕ
ಉಡುಪಿ ಕನ್ನರ್ಪಾಡಿ ನಿವಾಸಿ ಶರಣ್ ಶೆಟ್ಟಿ ಮತ್ತು ನವ್ಯ ಶೆಟ್ಟಿ ನವದಂಪತಿ, ಕಳೆದ 30 ವರ್ಷಗಳಿಂದ ವಿದ್ಯುತ್ ಸಂಪರ್ಕ ಇಲ್ಲದೇ ಪರದಾಡುತ್ತಿದ್ದ ಇಲ್ಲಿನ ಲೀಲಾ ಎಂಬುವರ ಮನೆಗೆ ವಿದ್ಯುತ್ ಸಂಪರ್ಕವನ್ನು ನೀಡಿದ್ದಾರೆ.
ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳಿ ಮತ್ತು ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈ ಮನೆಗೆ ವಿದ್ಯುತ್ ಸಂಪರ್ಕ ನೀಡಲಾಗಿದ್ದು, ಈ ಮನೆಗೆ ತಗುಲಿದ ವಿದ್ಯುತ್ ಸಂಪರ್ಕದ ಸಂಪೂರ್ಣ ವೆಚ್ಚವನ್ನು ನವದಂಪತಿ ಆಸರೆ ಚಾರಿಟೇಬಲ್ ಟ್ರಸ್ಟ್ಗೆ ಹಸ್ತಾಂತರಿಸಿದ್ದಾರೆ.