ಕರ್ನಾಟಕ

karnataka

ETV Bharat / state

ಇಂದು ಕರಂದ್ಲಾಜೆ ನಾಮಪತ್ರ ಸಲ್ಲಿಕೆ... ಶೋಭಾಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​ ಸಾಥ್​ - undefined

ಇಂದು ಉಮೇದುವಾರಿಕೆ ಸಲ್ಲಿಸಲಿರುವ ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ. ನಾಮಪತ್ರ ಸಲ್ಲಿಕೆ ವೇಳೆ ನಿರ್ಮಲಾ ಸೀತಾರಾಮನ್ ಭಾಗಿ. ಉಡುಪಿಯಲ್ಲಿ ಕನಕನ ಕಿಂಡಿ ಮೂಲಕ ಕೃಷ್ಣ ದರ್ಶನ ಪಡೆದ ರಕ್ಷಣಾ ಸಚಿವೆ.

ನಿರ್ಮಲಾ ಸೀತಾರಾಮನ್

By

Published : Mar 26, 2019, 10:33 AM IST

ಉಡುಪಿ: ಚಿಕ್ಕಮಗಳೂರು -ಉಡುಪಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ.

ಈಗಾಗಲೇ ಉಡುಪಿ ತಲುಪಿರುವ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊದಲು ಕೃಷ್ಣ ಮಠಕ್ಕೆ ಭೇಟಿ ನೀಡಿ ಕನಕನ ಕಿಂಡಿ ಮೂಲಕ ಕೃಷ್ಣನ ದರ್ಶನ ಪಡೆದರು.

ಅವರು ಇಂದು ಮಣಿಪಾಲದ ಕಂಟ್ರಿ ಇನ್ ಹೊಟೇಲ್​ನಲ್ಲಿ ಮೀನುಗಾರ ಸಮುದಾಯದ ನಿಯೋಗದ ಜೊತೆ ಮಾತುಕತೆ ನಡೆಸಲಿದ್ದಾರೆ. ಮಲ್ಪೆಯಿಂದ ನಾಪತ್ತೆಯಾಗಿರುವ ಮೀನುಗಾರರ ಮನೆಗಳಿಗೆ ತೆರಳಿ ಸಾಂತ್ವನ ಹೇಳಲಿದ್ದಾರೆ.

ನಂತರ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ನಡೆಯುವ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಬಳಿಕ, ಶೋಭಾ ಕರಂದ್ಲಾಜೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್​ ಭಾಗಿಯಾಗಲಿದ್ದಾರೆ.

For All Latest Updates

TAGGED:

ABOUT THE AUTHOR

...view details