ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ತ್ರಾಸಿ ಮಹಾಗಣಪತಿ ಸಭಾಭವನದಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಡೆದಿದ್ದಾರೆ.
ಉಡುಪಿಯಲ್ಲಿ ಬಾಲ್ಯವಿವಾಹ ತಡೆದ ಅಧಿಕಾರಿಗಳು - ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ತಲ್ಲೂರು ಗುಡ್ಡೆಯಂಗಡಿಯ 17 ವರ್ಷದ ಬಾಲಕಿಗೆ 28 ವರ್ಷದ ಹುಡುಗನೊಂದಿಗೆ ಮದುವೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಈ ಸಂಬಂಧ ಎಚ್ಚೆತ್ತ ಅಧಿಕಾರಿಗಳು ಮದುವೆ ನಡೆಯದಂತೆ ತಡೆದಿದ್ದಾರೆ.
ತಲ್ಲೂರು ಗುಡ್ಡೆಯಂಗಡಿಯ 17 ವರ್ಷದ ಬಾಲಕಿಗೆ 28 ವರ್ಷದ ಹುಡುಗನೊಂದಿಗೆ ಮದುವೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಂಡು 200 ಕ್ಕೂ ಹೆಚ್ಚು ಮಂದಿ ಮದುವೆ ಹಾಲ್ ನಲ್ಲಿ ಸೇರಿರುವ ಮಾಹಿತಿ ಬಂದ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ, ಪೊಲೀಸ್ ಇಲಾಖೆ ಗಂಗೊಳ್ಳಿ, ಗ್ರಾಮ ಪಂಚಾಯತ್ ತ್ರಾಸಿ ಇಲ್ಲಿನ ಅಧಿಕಾರಿಗಳ ತಂಡ ಮದುವೆ ಹಾಲ್ ಗೆ ಹಠಾತ್ ಭೇಟಿ ನೀಡಿ ಬಾಲ್ಯವಿವಾಹವನ್ನು ತಡೆದಿದೆ.
ಎರಡೂ ಕಡೆಯವರಿಗೂ ಬಾಲ್ಯವಿಹಾಹ ನಿಷೇಧ ಮತ್ತು ತಡೆಗಟ್ಟುವಿಕೆ ಕಾಯ್ದೆ ಬಗ್ಗೆ ಅರಿವು ಮೂಡಿಸಿದ ನಂತರ ಕುಟುಂಬದವರು ಮತ್ತು ಹಾಲ್ ಮಾಲೀಕರು, ಪುರೋಹಿತರಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಯಿತು.