ಉಡುಪಿ: ಯುವತಿ ಸಂಶಯಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಗೆಳೆಯ ಪ್ರಶಾಂತ್ ಮೊಗವೀರನನ್ನು ಬಂಧಿಸಲಾಗಿದೆ.
ಉಡುಪಿ ಯುವತಿ ಆಸ್ಪತ್ರೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ: ಗೆಳೆಯನ ಬಂಧನ - One arrested in Lady death in Udupi hospital case
ಉಡುಪಿ ಯುವತಿ ಸಂಶಯಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಯುವತಿ ಆತ್ಮಹತ್ಯೆಗೆ ಯತ್ನಿಸಿರುವುದು ತನಿಖೆ ವೇಳೆ ಬಹಿರಂಗವಾಗಿದೆ. ಆಕೆಯ ಗೆಳೆಯ ಪ್ರಶಾಂತ್ ವಿರುದ್ಧ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಕೇಸ್ ದಾಖಲಾಗಿದೆ.
ಗೆಳೆಯನ ಬಂಧನ
ಅ. 24 ರಂದು ಉಡುಪಿ ತಾಲೂಕಿನ ಕುಕ್ಕೆಹಳ್ಳಿ ನಿವಾಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಈಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆತಂದು, ಮೃತಪಟ್ಟ ಬಳಿಕ ಪ್ರಶಾಂತ್ ಕಣ್ಮರೆಯಾಗಿದ್ದ. ಯುವತಿ ಆತ್ಮಹತ್ಯೆಗೆ ಯತ್ನಿಸಿರುವುದು ತನಿಖೆ ವೇಳೆ ಬಹಿರಂಗವಾಗಿದ್ದು, ಪ್ರಶಾಂತ್ ವಿರುದ್ಧ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಬಗ್ಗೆ ಕೇಸ್ ದಾಖಲಾಗಿದೆ.
ಉಡುಪಿ ನಗರ ಠಾಣೆ ಪೊಲೀಸರು ಪ್ರಶಾಂತ್ನನ್ನ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಮೂರು ದಿನಗಳ ಕಾಲ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.