ಕರ್ನಾಟಕ

karnataka

ETV Bharat / state

ಮಹಿಳೆಯರ ದೇಹ ಸ್ಪರ್ಶಿಸಿ ಪರಾರಿಯಾಗುತ್ತಿದ್ದ ಸೆಕ್ಯುರಿಟಿ ಗಾರ್ಡ್ ಆರೆಸ್ಟ್​ - ಯುವತಿಯರಿಗೆ ಲೈಂಗಿಕ ಕಿರುಕುಳ

ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಸೆಕ್ಯುರಿಟಿ ಗಾರ್ಡ್ ಒಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ದೀಪಕ್ ನಾಯಕ್

By

Published : Nov 17, 2019, 12:45 PM IST

ಉಡುಪಿ: ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಸೆಕ್ಯುರಿಟಿ ಗಾರ್ಡ್‌ನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಪರ್ಕಳ, ಸಣ್ಣಕ್ಕಿಬೆಟ್ಟು ನಿವಾಸಿ ದೀಪಕ್ ನಾಯಕ್ ಬಂಧಿತ ಆರೋಪಿ.

ಉಡುಪಿಯ ಕೆನರಾ ಬ್ಯಾಂಕ್​ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ, ಮುಂಜಾನೆ ವಾಕಿಂಗ್ ಹೋಗುವ ಯುವತಿಯರು, ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ದೂರುಗಳು ಬಂದಿದ್ದವು.

ಅಷ್ಟೇ ಅಲ್ಲದೇ, ರಾತ್ರಿ ವೇಳೆಯೂ‌ ರಸ್ತೆ ಬದಿಯಲ್ಲಿ ನಿಂತು ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಮಹಿಳೆಯರ ದೇಹ ಸ್ಪರ್ಶಿಸಿ ನಂತರ ದ್ವಿಚಕ್ರ ವಾಹನದಲ್ಲಿ ಪರಾರಿಯಾಗುತ್ತಿದ್ದ ಈತನನ್ನು ಕೊನೆಗೂ ಪೊಲೀಸರು ಸೆರೆ ಹಿಡಿದಿದ್ದಾರೆ.

ABOUT THE AUTHOR

...view details