ಉಡುಪಿ: ಮೊನ್ನೆ ರಾತ್ರಿ ಉಡುಪಿ ಜಿಲ್ಲೆಯ ಕೋಟತಟ್ಟು ಕೊರಗ ಕಾಲೋನಿಯ ಮೆಹೆಂದಿ ಕಾರ್ಯಕ್ರಮಕ್ಕೆ ನುಗ್ಗಿ ಕೊರಗ ಸಮುದಾಯದವರ ಮೇಲೆ ಲಾಠಿಯಲ್ಲಿ ಥಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪಿಎಸ್ಐ ಸಂತೋಷ್ ಬಿ.ಪಿ ಅವರನ್ನು ಸಸ್ಪೆಂಡ್ ಮಾಡಲಾಗಿದ್ದು, ಹಾಗೆ ಉಳಿದ ಐವರನ್ನು ಎತ್ತಂಗಡಿ ಮಾಡಲಾಗಿದೆ.
ಕೋಟದಲ್ಲಿ ಪೊಲೀಸ್ ದೌರ್ಜನ್ಯ ಪ್ರಕರಣ: ಎಎಸ್ಐ ಸಸ್ಬೆಂಡ್, ಐವರು ಪೊಲೀಸರ ಎತ್ತಂಗಡಿ - Mehndi program in chikmagaluru
ಕೊರಗ ಕಾಲೋನಿಯ ಮೆಹೆಂದಿ ಕಾರ್ಯಕ್ರಮಕ್ಕೆ ನುಗ್ಗಿ ಕೊರಗ ಸಮುದಾಯದವರ ಮೇಲೆ ಲಾಠಿಯಲ್ಲಿ ಥಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪಿಎಸ್ಐ ಸಂತೋಷ್ ಬಿ.ಪಿ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಎಎಸ್ಐ ಸಸ್ಬೆಂಡ್ ,ಐವರು ಪೊಲೀಸರ ಎತ್ತಂಗಡಿ
ಈ ಕುರಿತು ಇಂದು ಮಾಹಿತಿ ನೀಡಿರುವ ಉಡುಪಿ ಎಸ್ಪಿ ವಿಷ್ಣುವರ್ಧನ್, ಕೋಟದಲ್ಲಿ ನಡೆದ ಕೊರಗ ಸಮುದಾಯದವರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಆಧಾರದಲ್ಲಿ ಕೋಟ ಪಿಎಸ್ಐ ಅವರನ್ನು ಪಶ್ಚಿಮ ವಲಯ ಐಜಿಪಿ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನು ಪ್ರಕರಣದ ಉಳಿದ ಐದು ಮಂದಿ ಪೊಲೀಸ್ ಸಿಬ್ಬಂದಿಯನ್ನು ಕೋಟ ಪೊಲೀಸ್ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ.