ಉಡುಪಿ: ಜಿಲ್ಲೆಯ ಶಿರ್ವ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ವಂ| ಮಹೇಶ್ ಡಿಸೋಜಾ (36) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಾನಸಿಕ ಖಿನ್ನತೆ: ಶಾಲಾ ಕಚೇರಿ ಕ್ಯಾಬಿನ್ನೊಳಗೆ ಆತ್ಮಹತ್ಯೆಗೆ ಶರಣಾದ ಪ್ರಾಂಶುಪಾಲ ಮಹೇಶ್ ಡಿಸೋಜಾ - ಉಡುಪಿ ಅಪರಾಧ ಸುದ್ದಿ
ಉಡುಪಿಯ ಶಿರ್ವ ಡೋನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ವಂ| ಮಹೇಶ್ ಡಿಸೋಜಾ (36) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಾಂಶುಪಾಲ ವಂ| ಮಹೇಶ್ ಡಿಸೋಜಾ
ಶಾಲೆಯ ಕ್ಯಾಬಿನ್ ಒಳಗೆ ಶುಕ್ರವಾರ ರಾತ್ರಿ ನೇಣಿಗೆ ಶರಣಾಗಿದ್ದು, ಮಾನಸಿಕ ಖಿನ್ನತೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಉಡುಪಿ ಧರ್ಮ ಪ್ರಾಂತ್ಯದ ಉದಯದ ಬಳಿಕ ಮೊದಲ ಧರ್ಮಗುರು ಆಗಿದ್ದ ಇವರು, ಮೂಲತಃ ಮೂಡಬೆಳ್ಳೆಯವರಾಗಿದ್ದರು. 2013 ರಲ್ಲಿ ಗುರುದೀಕ್ಷೆ ಪಡೆದಿದ್ದು, ಡಾನ್ ಬಾಸ್ಕೊ ಶಾಲೆಯನ್ನು ಸಿಬಿಎಸ್ಸಿ ಪಠ್ಯಕ್ರಮಕ್ಕೆ ಪರಿವರ್ತಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.ಇನ್ನು ಈ ಸಂಬಂಧ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.