ಉಡುಪಿ:ಉಡುಪಿ ಜಿಲ್ಲೆಯ ಸಬ್ ಜೈಲಿನಲ್ಲಿ ಸದಾನಂದ ಸೇರಿಗಾರ್ ಎಂಬ ಕೈದಿ ವಿಚಾರಣ ದಿನದಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಐದು ಗಂಟೆಗೆ 20 ಮಂದಿ ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆಯನ್ನು ಸಹ ಕೈದಿಗಳು ಗಮನಿಸಿ ನೇಣಿನ ಕುಣಿಕೆಯಿಂದ ಬಿಡಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಆರೋಪಿ ಸಾವನ್ನಪ್ಪಿದ್ದಾರೆ. ಮೃತ ಆರೋಪಿ ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಸರ್ವೇಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.