ಉಡುಪಿ:ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಗಂಡನನ್ನು ಕೊಲೆ ಮಾಡಿರುವ ಆರೋಪವನ್ನು ಹೊತ್ತಿರುವ ರಾಜೇಶ್ವರಿ ಶೆಟ್ಟಿ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ.
ಕೊಲೆ ಆರೋಪಿ ರಾಜೇಶ್ವರಿ ಶೆಟ್ಟಿ ಮೇಲೆ ಮತ್ತೊಂದು ಪ್ರಕರಣ ದಾಖಲು ಹೋಮಕುಂಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಉದ್ಯಮಿ ಭಾಸ್ಕರ್ ಶೆಟ್ಟಿಯವರ ಪತ್ನಿ. ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯನ್ನು ಕೊಂದು ಹೋಮಕುಂಡದಲ್ಲಿ ಸುಟ್ಟು ಹಾಕಿರುವ ಆರೋಪ ರಾಜೇಶ್ವರಿ ಶೆಟ್ಟಿ ಮೇಲಿದೆ.
ಕೊಲೆ ಆರೋಪಿ ರಾಜೇಶ್ವರಿ ಶೆಟ್ಟಿ ಮೇಲೆ ಮತ್ತೊಂದು ಪ್ರಕರಣ ದಾಖಲು ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿರುವ ರಾಜೇಶ್ವರಿ ಶೆಟ್ಟಿ ತನ್ನ ಮಾಲೀಕತ್ವದ ಖಾಸಗಿ ಹೋಟೆಲ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು ಎಂಬ ಆರೋಪ ಕೇಳಿ ಬಂದಿದೆ.
ಕೊಲೆ ಆರೋಪಿ ರಾಜೇಶ್ವರಿ ಶೆಟ್ಟಿ ಮೇಲೆ ಮತ್ತೊಂದು ಪ್ರಕರಣ ದಾಖಲು ಈಗಾಗಲೇ ವೇಶ್ಯಾವಾಟಿಕೆ ಪ್ರಕರಣದಲ್ಲಿ ಮೂವರ ಬಂಧನವಾಗಿದೆ. ಆರೋಪಿಗಳಾದ ಶೇಖರ ಶೆಟ್ಟಿ, ಜಾನ್ಸನ್ ಡಿ ಅಲ್ಮೇಡಾ, ಹರ್ಷಿತ್ ಶೆಟ್ಟಿ ಪೊಲೀಸರ ಅತಿಥಿಯಾಗಿದ್ದು, ಆರೋಪಿ ರಾಜೇಶ್ವರಿ ಶೆಟ್ಟಿಯ ಬಂಧನಕ್ಕೆ ಪೊಲೀಸರು ತಯಾರಿ ನಡೆಸಿದ್ದಾರೆ.
ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.