ಉಡುಪಿ:ನಗರದ ಲಾಡ್ಜ್‌ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ.
ಲಾಡ್ಜ್ ಮೇಲೆ ಪೊಲೀಸರ ದಾಳಿ ವೇಳೆ ಮಹಿಳೆಯೊಬ್ಬಳನ್ನು ರಕ್ಷಿಸಲಾಗಿದೆ. ದಂಧೆ ಬಗ್ಗೆ ಲಾಡ್ಜ್ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.