ಉಡುಪಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಉಡುಪಿಯ ಹಲವೆಡೆ ಪ್ರತಿಭಟನೆ ನಡೆಸಲಾಯಿತು.
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ.. - ಪೌರತ್ವ ತಿದ್ದುಪಡಿ ಮಸೂದೆ
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಉಡುಪಿಯ ಹಲವೆಡೆ ಪ್ರತಿಭಟನೆ ನಡೆಸಲಾಯಿತು.
ಉಡುಪಿಯಲ್ಲಿ ಮುಸ್ಲಿಂ ಬಾಂಧವರು ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ಜಾಮಿಯಾ ಮಸೀದಿ, ದೊಡ್ಡಣಗುಡ್ಡೆ, ನೇಜಾರು ಕಡೆಗಳಲ್ಲಿ ಪ್ರತಿಭಟನೆ ಮಾಡಿದ್ರು. ಈ ಮಸೂದೆ ದೇಶದ ಹಿತಾಸಕ್ತಿ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಈ ಮಸೂದೆಯನ್ನು ಮುಸ್ಲಿಮರು ಬೆಂಬಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಜೆಗಳನ್ನು ಧರ್ಮ, ನಂಬಿಕೆಗಳ ನೆಲೆಯಲ್ಲಿ ವಿಭಜಿಸುವ ಮಸೂದೆಗೆ ನಮ್ಮ ವಿರೋಧವಿದೆ. ಇವತ್ತು ಸಾಂಕೇತಿಕ ಪ್ರತಿಭಟನೆಯಷ್ಟೇ ಮಾಡುತ್ತಿದ್ದೇವೆ. ಈ ವಿವಾದಾತ್ಮಕ ಮಸೂದೆ ವಾಪಸ್ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.