ಕರ್ನಾಟಕ

karnataka

ETV Bharat / state

ನಿರಂತರ ಮಳೆ: ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ - ಉಡುಪಿ

ಕರಾವಳಿ ತೀರ ಪ್ರದೇಶದಲ್ಲಿ ಜೋರಾಗಿ ಗಾಳಿ ಬೀಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್

By

Published : Aug 14, 2019, 9:45 PM IST

ಉಡುಪಿ:ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಕರ್ನಾಟಕ ಕರಾವಳಿಯಲ್ಲಿ ಆ.15 ಗುರುವಾರ ಜೋರಾಗಿ ಮಳೆ (205 ಮೀಮೀ) ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ರಭಸವಾಗಿ ಗಾಳಿ ಬೀಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ

ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಸಂಬಂಧ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮುಂದಿನ ಮೂರು ದಿನಗಳ ಕಾಲ ಸಮುದ್ರ ಹಾಗೂ ನದಿಗಳಲ್ಲಿ ಮೀನುಗಾರರು ಕಡ್ಡಾಯವಾಗಿ ಹಡಗು, ದೋಣಿಗಳನ್ನು ನೀರಿಗೆ ಇಳಿಸದಂತೆ ಕಟ್ಡು ನಿಟ್ಟಿನ ಸೂಚನೆಯನ್ನೂ ನೀಡಲಾಗಿದೆ.

ABOUT THE AUTHOR

...view details