ಉಡುಪಿ:ಜಿಲ್ಲೆಯ ಗಂಗೊಳ್ಳಿಯಲ್ಲಿ ನಾಳೆ ವೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆನಡೆಯಲಿದೆ. ಈ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ಆದೇಶ ಹೊರಡಿಸಿದ್ದಾರೆ.
ನಾಳೆ ಗಂಗೊಳ್ಳಿಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ.. ಉಡುಪಿ ಜಿಲ್ಲೆಗೆ ಮುತಾಲಿಕ್ಗೆ ಪ್ರವೇಶ ನಿರ್ಬಂಧ - ಉಡುಪಿ ಜಿಲ್ಲೆ ಪ್ರವೇಶಿಸದಂತೆ ಪ್ರಮೋದ್ ಮುತಾಲಿಕ್ಗೆ ನಿರ್ಬಂಧ
ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ನಾಳೆ ವೀರೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ ಕಾರ್ಯಕ್ರಮಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ನಿರ್ಬಂಧ ವಿಧಿಸಲಾಗಿದೆ.
ಪ್ರಮೋದ್ ಮುತಾಲಿಕ್ಗೆ ನಾಳೆ ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧ
ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕರ ಹಿತ ಕಾಪಾಡುವ ದೃಷ್ಟಿಯಿಂದ ಏ.15(ಶುಕ್ರವಾರ)ದಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಆಗಮನದ ಪ್ರವೇಶಕ್ಕೆ ಉಡುಪಿ ಜಿಲ್ಲಾದ್ಯಂತ ನಿರ್ಬಂಧ ಹೇರಲಾಗಿದೆ. ಸಿ.ಆರ್.ಪಿ.ಸಿ ಸೆಕ್ಷನ್ 133, 143 ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರು ಕರಗ ಮಹೋತ್ಸವ ಮೆರವಣಿಗೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್