ಉಡುಪಿ: ಬ್ರಹ್ಮಾವರ ವ್ಯಾಪ್ತಿಯ ಕುಂಜಾಲು ರಸ್ತೆ ಅಗಲೀಕರಣ ಮತ್ತು ಮರ ತೆರವು ವಿಚಾರಕ್ಕೆ ಸಂಬಂಧಿಸಿ, ಶಾಸಕರು ಮತ್ತು ಅರಣ್ಯಾಧಿಕಾರಿ ನಡುವೆ ಜಟಾಪಟಿ ನಡೆದಿದೆ.
ಶಾಸಕ ಮತ್ತು ಅರಣ್ಯಾಧಿಕಾರಿ ನಡುವೆ ಜಟಾಪಟಿ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಶಾಸಕ ರಘುಪತಿ ಭಟ್ ಮತ್ತು ಹೆಬ್ರಿ ವಲಯಾಧಿಕಾರಿ ಮುನಿರಾಜು ಅವರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಅರಣ್ಯಾಧಿಕಾರಿ ಅಗೌರವ ತೋರಿದ್ದಾರೆ ಎಂದು ಶಾಸಕ ರಘುಪತಿ ಭಟ್ ಅಧಿಕಾರಿ ವಿರುದ್ಧ ಕೆಂಡಾಮಂಡಲವಾದ್ರು.
ಅಗೌರವ ತೋರಿಲ್ಲ, ನಾನು ಸರ್ಕಾರಿ ಇಲಾಖೆಯ ಅಧಿಕಾರಿ, ಹಾಗಾಗಿ ಗೌರವಕೊಟ್ಟು ಮಾತನಾಡಿ ಎಂದು ಹೇಳಿದೆ ಎಂಬುದಾಗಿ ಮುನಿರಾಜು ಸ್ಪಷ್ಟನೆ ನೀಡಿದ್ದಾರೆ.
ಅಧಿಕಾರಿಯ ಈ ಮಾತಿಗೆ ಮತ್ತಷ್ಟು ಕೆರಳಿದ ಶಾಸಕರು ಜನಪ್ರತಿನಿಧಿಯ ಸಾಲಿನಲ್ಲಿ ಕುಳಿತ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಗುಡುಗಿದರು. ನಂತರ ಅಧಿಕಾರಿಗಳ ಸಾಲಿನಲ್ಲಿ ಕುಳಿತುಕೊಳ್ಳುವಂತೆ ಸೂಚಿಸಿದರು. ಮುನಿರಾಜ್ ಅಧಿಕಾರಿಗಳ ಸಾಲಿನಲ್ಲಿ ಕುಳಿತ ನಂತರ ಶಾಸಕರು ಹಾಗೂ ಅಧಿಕಾರಿಯ ನಡುವೆ ಜಟಾಪಟಿ ಮುಂದುವರಿಯಿತು.