ಕರ್ನಾಟಕ

karnataka

ETV Bharat / state

ಮುಂದುವರಿದ ಹಿಜಾಬ್ ವಿವಾದ: ಕುಂದಾಪುರದಲ್ಲಿ ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿ, ಕೆಲವು ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ. ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು, ನಾವು ಸರ್ಕಾರದ ಆದೇಶ ಪಾಲಿಸಲು ಸಿದ್ಧ, ಆದ್ರೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ರೆ ನಾವು ಕೇಸರಿ ಶಾಲು ಧರಿಸುತ್ತೇವೆ ಎಂದಿದ್ದಾರೆ.

ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು
ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

By

Published : Feb 2, 2022, 9:15 PM IST

ಉಡುಪಿ: ಇಷ್ಟು ದಿನ ಉಡುಪಿ ಕಾಲೇಜಿನಲ್ಲಿ ನಡೆಯುತ್ತಿದ್ದ ಹಿಜಾಬ್ ವಿವಾದ ಇದೀಗ ಕುಂದಾಪುರ ಕಾಲೇಜಿಗೆ ಕಾಲಿಟ್ಟಿದೆ. ಜ್ಞಾನ ದೇಗುಲ ವಸ್ತ್ರ ಸಂಘರ್ಷದ ಗೂಡಾಗಿ ಬದಲಾಗುತ್ತಿದೆ. ಉಡುಪಿ ಸರ್ಕಾರಿ ಪಿಯು ಕಾಲೇಜಿನ ಹಿಜಾಬ್ ವಿವಾದ ಇನ್ನೂ ತಣ್ಣಗಾಗಿಲ್ಲ, ಅದಾಗಲೇ ಪಕ್ಕದ ತಾಲೂಕಾದ ಕುಂದಾಪುರದಲ್ಲೂ ಹಿಜಾಬ್ ವಿವಾದ ಸೃಷ್ಟಿಯಾಗಿದೆ.

ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದಿದ್ದಾರೆ.

ಕುಂದಾಪುರ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ಕಾಲೇಜ್​​ಗೆ 27 ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರ್ತಾ ಇದ್ರು. ಇದಕ್ಕೆ ಸೆಡ್ಡು ಹೊಡೆಯಲು ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ. ಕೊನೆಗೆ ಸ್ಥಳೀಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ನೇತೃತ್ವದಲ್ಲಿ ಪೋಷಕರ ಸಭೆ ನಡೆಸಲಾಯಿತು. ಆದ್ರೆ ಇಲ್ಲೂ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು.. ತರಗತಿಗೆ ಅವಕಾಶ ಕೊಡದ ಪ್ರಾಂಶುಪಾಲರು.. ಕೋರ್ಟ್‌ಗೆ ಸ್ಟುಡೆಂಟ್‌ ಮೊರೆ..

ಸಭೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರು ನಾವು ಹಿಂದೂ ಸಂಪ್ರದಾಯದ ಯಾವುದೇ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯುವಾಗಲೂ ವಿರೋಧ ಮಾಡಿಲ್ಲ. ಈಗ ನಮ್ಮ ಹಿಜಾಬ್ ವಿವಾದ ಯಾಕೆ ದೊಡ್ಡದು ಮಾಡ್ತೀರಾ ಅಂತ ಶಾಸಕರನ್ನು ಪ್ರಶ್ನಿಸಿದ್ದಾರೆ. ಕೊನೆಗೆ ಶಾಸಕರು ಶಿಕ್ಷಣ ಸಚಿವ ನಾಗೇಶ್ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

ABOUT THE AUTHOR

...view details