ಕರ್ನಾಟಕ

karnataka

ETV Bharat / state

ಉಡುಪಿ, ಶಿವಮೊಗ್ಗ: ಪಿಯು, ಪದವಿ ಕಾಲೇಜು ಆವರಣದಲ್ಲಿ ಸೆಕ್ಷನ್ 144 ಜಾರಿ - ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ

ಹಿಜಾಬ್​ ವಿವಾದದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯ ಪಿಯುಸಿ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಉಡುಪಿ, ಶಿವಮೊಗ್ಗದಲ್ಲಿ ಸೆಕ್ಷನ್ 144  ಜಾರಿ
ಉಡುಪಿ, ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ

By

Published : Feb 16, 2022, 9:12 AM IST

ಉಡುಪಿ/ಶಿವಮೊಗ್ಗ: ರಾಜ್ಯಾದ್ಯಂತ ಇಂದಿನಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗುತ್ತಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಿಷೇಧಾಜ್ಞೆ (ಸೆಕ್ಷನ್ 144) ಜಾರಿ ಮಾಡಲಾಗಿದೆ.

ಹಿಜಾಬ್​ ವಿವಾದದ ಕಾರಣ ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ, ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಎಚ್ಚರಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಫೆಬ್ರವರಿ 19ರ ರಾತ್ರಿ 9 ಗಂಟೆವರೆಗೆ ಈ ನಿಯಮ ಅನ್ವಯವಾಗಲಿದೆ. ಶಾಲಾ-ಕಾಲೇಜುಗಳ ಆವರಣದಿಂದ 200 ಮೀಟರ್ ಒಳಗಡೆ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಡಿಸಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.

ಇದನ್ನೂ ಓದಿ:ಇಂದು ಕಾಲೇಜು ಆರಂಭ: ಉಡುಪಿಯಲ್ಲಿ 700ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ABOUT THE AUTHOR

...view details