ಉಡುಪಿ: ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ವಿಶ್ವಸ್ಥ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರಕಾರ ವೈ ಶ್ರೇಣಿ ಭದ್ರತೆ ನೀಡಿದೆ.
ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ನಿರತರಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಅಲ್ಲಲ್ಲಿ ಸಭೆ, ಸಮಾರಂಭ ಕಾರ್ಯಕ್ರಮ ಉದ್ಘಾಟನೆ, ಧನ ಸಂಗ್ರಹ ಕಚೇರಿ ತೆರೆಯುತ್ತಿದ್ದಾರೆ. ಹೀಗಾಗಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.