ಉಡುಪಿ: ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೆಬ್ರಿ ತಾಲೂಕಿನ ನಡುಮನೆ ಗ್ರಾಮದಲ್ಲಿ ನಡೆದಿದೆ.
ಕನ್ನಡದಲ್ಲಿ ಫೇಲ್ ಆದೆ ಅಂತಾ ಮನನೊಂದ ವಿದ್ಯಾರ್ಥಿನಿ ನೇಣಿಗೆ ಶರಣು - undefined
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಪ್ರಜ್ಞಾ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಪ್ರಜ್ಞಾ, ಬ್ರಹ್ಮಾವರದ ಬೋರ್ಡ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಶಿಕ್ಷಣ ಪಡೆದಿದ್ದಳು. ಇತ್ತೀಚೆಗೆಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಅದರ ಫಲಿತಾಂಶ ಸೋಮವಾರದಂದು ಪ್ರಕಟಗೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಬಂಧಿಕರು ಆಕೆಯ ರಿಸಲ್ಟ್ ನೋಡಿದಾಗ ಕನ್ನಡ ಭಾಷೆಯಲ್ಲಿ 4 ಅಂಕ ಪಡೆದು ಫೇಲ್ ಆಗಿದ್ದಾಳೆ ಎಂಬ ವಿಷಯ ತಿಳಿದು ಬಂದಿದೆ. ಇದರಿಂದ ಮನನೊಂದು ಮನೆಯಲ್ಲಿ ತಾಯಿ ಹಾಗೂ ಅಜ್ಜಿ ಇರುವಾಗಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಈಕೆ ಕನ್ನಡ ಹೊರತಾಗಿ ಉಳಿದೆಲ್ಲ ವಿಷಯಗಳಲ್ಲಿ 60ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾಳೆ. ಸದ್ಯ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.