ಕರ್ನಾಟಕ

karnataka

ETV Bharat / state

ಕ್ರೀಡಾಕೂಟದ ವೇಳೆ ಅಜಾನ್​ ನೃತ್ಯ ಆರೋಪ..ಉಡುಪಿಯಲ್ಲಿ ಪ್ರತಿಭಟನೆ

ಉಡುಪಿ ಸಮೀಪದ ಶಂಕರನಾರಾಯಣ ಪ್ರದೇಶದಲ್ಲಿರುವ ಶಾಲೆಯೊಂದರ ಆವರಣದಲ್ಲಿ ಆಯೋಜಿಸಿದ್ದ ವಲಯ ಕ್ರೀಡಾಕೂಟದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

By

Published : Nov 16, 2022, 5:20 PM IST

Students made to dance to Azan in sports meet, Hindu outfits protest udupi
ಕ್ರೀಡಾಕೂಟದ ವೇಳೆ ಅಜಾನ್​ ನೃತ್ಯ ಆರೋಪ

ಉಡುಪಿ: ಕ್ರೀಡಾ ಕೂಟದ ವೇಳೆ ವಿದ್ಯಾರ್ಥಿಗಳಿಗೆ ಬಲವಂತವಾಗಿ ಅಜಾನ್​ಗೆ ನೃತ್ಯ ಮಾಡಿಸಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ.

ಉಡುಪಿ ಪೇಟೆ ಸಮೀಪದ ಶಂಕರನಾರಾಯಣ ಪ್ರದೇಶದಲ್ಲಿರುವ ಶಾಲೆಯೊಂದರ ಆವರಣದಲ್ಲಿ ಆಯೋಜಿಸಿದ್ದ ವಲಯ ಕ್ರೀಡಾಕೂಟದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವಿದ್ಯಾರ್ಥಿಗಳು ಅಜಾನ್‌ಗೆ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಉದ್ಘಾಟನಾ ಸಮಾರಂಭದಲ್ಲಿ ಎಲ್ಲ ಧರ್ಮಗಳನ್ನು ಪ್ರತಿನಿಧಿಸುವ ಹಾಡಿಗೆ ನೃತ್ಯ ಮಾಡಲಾಗಿದೆ ಎಂದು ಸಂಘಟಕರು ಸ್ಪಷ್ಟನೆ ನೀಡಿದ್ದಾರೆ ಎಂದೂ ವರದಿಯಾಗಿದೆ. ಆದರೆ, ಹಿಂದೂ ಸಂಘಟನೆಗಳ ಕಾರ್ಯಕರ್ತರು ಈ ಘಟನೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಶಂಕರನಾರಾಯಣ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ:ಬೇಡಿಕೆ ಈಡೇರಿಸುವಂತೆ ಕಬ್ಬು ಬೆಳೆಗಾರರ ಆಗ್ರಹ.. ಮಂಡ್ಯದಲ್ಲಿ ರೈತರ ಬೃಹತ್​ ಪ್ರತಿಭಟನೆ

ABOUT THE AUTHOR

...view details