ಕರ್ನಾಟಕ

karnataka

ETV Bharat / state

ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಅಸುನೀಗಿದ ಹತ್ತು ತಿಂಗಳ ಕಂದಮ್ಮ - Udupi latest news

ಉಡುಪಿಯಲ್ಲಿ ಜ್ವರ ಹಾಗೂ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಹತ್ತು ತಿಂಗಳ ಮಗು ಸಾವನ್ನಪ್ಪಿದ್ದು, ಅದರ ಗಂಟಲು ದ್ರವವನ್ನು ಪರೀಕ್ಷೆಗೆ ರವಾನಿಸಲಾಗಿದೆ.

Udupi
Udupi

By

Published : Jul 2, 2020, 9:29 PM IST

ಉಡುಪಿ: ಜ್ವರ ಮತ್ತು ಉಸಿರಾಟ ತೊಂದರೆಯಿಂದ ಹತ್ತು ತಿಂಗಳ ಮಗು ಸಾವನ್ನಪ್ಪಿದ ಘಟನೆ ಕಾರ್ಕಳದ ಮಿಯಾರು ಗ್ರಾಮದಲ್ಲಿ ನಡೆದಿದೆ.

ಮೂಲತಃ ಬಿಜಾಪುರ ಜಿಲ್ಲೆಯ ದಂಪತಿಯ ಮಗು ಇದಾಗಿದ್ದು, ಏಪ್ರಿಲ್ ತಿಂಗಳಲ್ಲಿ ಊರಿಗೆ ಹೋದ ದಂಪತಿ ಹತ್ತು ದಿನಗಳ ಹಿಂದೆ ವಾಪಾಸಾಗಿದ್ದರು.

ಈ ನಡುವೆ ಜೂನ್ .28 ರಂದು ಮಗುವಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ತಾಲೂಕು ಆಸ್ಪತ್ರೆಗೆ ಕರೆತರುವಾಗ ಮಗು ಸಾವನ್ನಪ್ಪಿದೆ.

ಮಗುವಿನ ಗಂಟಲ ದ್ರವ ಪರೀಕ್ಷೆಗಾಗಿ ರವಾನೆ ಮಾಡಲಾಗಿದ್ದು, ವರದಿಗಾಗಿ ಆರೋಗ್ಯಾಧಿಕಾರಿಗಳು ಕಾಯುತ್ತಿದ್ದಾರೆ.

ABOUT THE AUTHOR

...view details