ಕರ್ನಾಟಕ

karnataka

ETV Bharat / state

ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ: ಮುಂದೇನಾಯ್ತು? - ವಿದ್ಯುತ್ ಕಂಬಕ್ಕೆ ಡಿಕ್ಕಿ

ಕಲ್ಯಾಣಪುರ ನಿವಾಸಿ ಆನಂದ್ ಪದ್ಮನಾಭನ್ ಎಂಬುವರು ಸಂತೇಕಟ್ಟೆಯಿಂದ ಉಡುಪಿ ಕಡೆಗೆ ಕಾರನ್ನು ಚಲಾಯಿಸುತ್ತಿದ್ದ ವೇಳೆ ಉಡುಪಿಯ ಕರಾವಳಿ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ವಿದ್ಯುತ್​ ಕಂಬಕ್ಕೆ ಡಿಕ್ಕಿ

By

Published : Sep 6, 2019, 10:14 PM IST

ಉಡುಪಿ: ನಗರದ ಕರಾವಳಿ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಕಾರು ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್​ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ವಿದ್ಯುತ್​ ಕಂಬಕ್ಕೆ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

ಕಲ್ಯಾಣಪುರ ನಿವಾಸಿ ಆನಂದ್ ಪದ್ಮನಾಭನ್ ಎಂಬುವರು ಸಂತೇಕಟ್ಟೆಯಿಂದ ಉಡುಪಿ ಕಡೆಗೆ ಕಾರನ್ನು ಚಲಾಯಿಸುತ್ತಿದ್ದ ವೇಳೆ ಈ ದುರ್ಘಟನೆಯಾಗಿದ್ದು, ಕಾರಿನ ಚಾಲಕನಿಗೆ ಯಾವುದೇ ರೀತಿ ಗಂಭೀರ ಗಾಯವಾಗಿಲ್ಲ.

ಒಬ್ಬರೇ ಇದ್ದ ಕಾರಣ ಪ್ರಾಣ ಹಾನಿ ತಪ್ಪಿದೆ. ಸ್ಥಳೀಯ ರಿಕ್ಷಾ ಚಾಲಕರು ಗಾಯಾಳುವನ್ನು ಮಣಿಪಾಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಕಾರು ಸಂಪೂರ್ಣ ಹಾನಿಯಾಗಿದ್ದು, ಸದ್ಯ ಉಡುಪಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ABOUT THE AUTHOR

...view details