ಕರ್ನಾಟಕ

karnataka

ETV Bharat / state

ಪಾಕ್​ ಪರ ಘೋಷಣೆ ಕೂಗುವವರಿಗೆ ಉಗ್ರ ಶಿಕ್ಷೆ ಆಗಬೇಕು: ಸಂಸದೆ ಶೋಭಾ ಕರಂದ್ಲಾಜೆ

ಪಾಕ್ ಪರ ಘೋಷಣೆ ಕೂಗುವವರಿಗೆ ಉಗ್ರ ಶಿಕ್ಷೆ ಆಗಬೇಕು. ಈ ಸಂಬಂಧ ದೇಶದ ಮತ್ತು ರಾಜ್ಯದ ಕಾನೂನಲ್ಲಿ ಬದಲಾವಣೆ ಆಗಬೇಕು. ಇದರ ಹಿಂದೆ ಇರುವ ವ್ಯಕ್ತಿಗಳ ತನಿಖೆ ಆಗಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

MP Shobha Karandlaje
ಸಂಸದೆ ಶೋಭಾ ಕರಂದ್ಲಾಜೆ

By

Published : Feb 21, 2020, 8:21 PM IST

ಉಡುಪಿ:ಪಾಕ್ ಪರ ಘೋಷಣೆ ಕೂಗುವವರಿಗೆ ಉಗ್ರ ಶಿಕ್ಷೆ ಆಗಬೇಕು. ಭಾರತ ವಿರೋಧಿ ಘೋಷಣೆ ಕೂಗುವ ಜಾಲ ನಿರ್ಮಾಣ ಆಗಿದೆ. ದೇಶದಲ್ಲಿ ಜಿನ್ನಾ ಮಾನಸಿಕತೆ ಸೃಷ್ಟಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಪಾಕಿಸ್ತಾನ ಜಿಂದಾಬಾದ್ ಕೂಗಿದ ಅಮೂಲ್ಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಹಣ ಕೊಟ್ಟು ಒತ್ತಡ ಹಾಕಿ ಪ್ರಚಾರಕ್ಕಾಗಿ ಹೇಳಿಕೆ ಕೊಡಲಾಗುತ್ತಿದೆ. ಪಾಕ್ ಪರ ಘೋಷಣೆ ಕೂಗುವವರಿಗೆ ಉಗ್ರ ಶಿಕ್ಷೆ ಆಗಬೇಕು. ಈ ಸಂಬಂಧ ದೇಶದ ಮತ್ತು ರಾಜ್ಯದ ಕಾನೂನಲ್ಲಿ ಬದಲಾವಣೆ ಆಗಬೇಕು. ಇದರ ಹಿಂದೆ ಇರುವ ವ್ಯಕ್ತಿಗಳ ಬಗ್ಗೆ ತನಿಖೆ ಆಗಬೇಕು. ಆಯೋಜಕರ ತನಿಖೆಯೂ ನಡೆಯಬೇಕು. ಘೋಷಣೆ ಕೂಗಿದ ಅಮೂಲ್ಯ ತಂದೆ ಬಗ್ಗೆಯೂ ತನಿಖೆಯಾಗಬೇಕು ಎಂದಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ

ಅಮೂಲ್ಯ ತಂದೆ ಕೊಪ್ಪದವರು, ಹಿಂದೆ ನಕ್ಸಲರ ಜೊತೆ ಅವರಿಗೆ ಸಂಪರ್ಕ ಇತ್ತು. ಈ ಬಗ್ಗೆ ಪೊಲೀಸರಿಗೂ ಮಾಹಿತಿ ಇದೆ. ಸಿರಿಮನೆ ನಾಗರಾಜು ಮತ್ತು ನಕ್ಸಲ್ ಬೆಂಬಲಿಗರ ಒಡನಾಟ ಅವರಿಗೆ ಇದೆ. ನಿನ್ನೆ ಘೋಷಣೆ ಕೂಗಿದ ಹುಡುಗಿ ಯಾರು? ಅವಳ ಹಿನ್ನೆಲೆ ಏನು, ಈಕೆಗೆ ಯಾವ ಸಂಘಟನೆಯ ಜೊತೆ ಸಂಬಂಧ ಇದೆ? ಈ ಬಗ್ಗೆ ತನಿಖೆಯಾಗಬೇಕು. ಎಲ್ಲರನ್ನೂ ದೇಶದ್ರೋಹದ ಕೇಸಿನ ಮೇಲೆ ಜೈಲಿಗೆ ಹಾಕಬೇಕು ಎಂದು ಶೋಭಾ ಆಗ್ರಹಿಸಿದ್ದಾರೆ.

ಯಾವುದೇ ವಕೀಲರು ಕೇಸ್​​ ನಡೆಸಬಾರದು. ಹುಬ್ಬಳ್ಳಿಯಲ್ಲಿ ಕೇಳಿ ಬಂದ ಪಾಕ್​ ಪರ ಘೋಷಣೆ ಪ್ರಕರಣದಲ್ಲಿ ಬೆಂಗಳೂರಿನ ವಕೀಲರು ವಾದ ಮಾಡಲು ಹೋಗಿದ್ದಾರೆ. ರಾಷ್ಟ್ರಪ್ರೇಮದ ವಿಚಾರದಲ್ಲಿ ಯಾರೂ ರಾಜಿ ಆಗಬೇಡಿ. ಚುನಾವಣೆ ಬಂದಾಗ ರಾಜಕೀಯ ಮಾಡೋಣ. ಆದರೆ ಭಾರತ ಮಾತೆಯ ಬಗ್ಗೆ ಅವಹೇಳನ ಮಾಡಿದವರಿಗೆ ಉಗ್ರ ಶಿಕ್ಷೆಯಾಗಬೇಕು ಎಂದರು.

ಅಮೂಲ್ಯಗೆ ಮಾತನಾಡಲು ಅವಕಾಶ ನೀಡಬೇಕಿತ್ತು ಎಂಬ ಮಾಜಿ ಸಚಿವ ಡಿಕೆಶಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದೆ, ಡಿಕೆಶಿ ಮೂಲ ಕಾಂಗ್ರೆಸ್ಸಿಗ ಅಲ್ಲ. ನಿಜವಾದ ಕಾಂಗ್ರೆಸ್ಸಿಗರು ಈ ಹೇಳಿಕೆ ನೀಡುತ್ತಿರಲಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಪಕ್ಷ ಕಾಂಗ್ರೆಸ್ ಅಂತಾರೆ. ಹೇಳಿಕೆ ನೀಡಿದ ಡಿಕೆಶಿ ಬಗ್ಗೆಯೂ ತನಿಖೆಯಾಗಬೇಕು ಎಂದು ಹೇಳಿದರು.

ABOUT THE AUTHOR

...view details