ಉಡುಪಿ: ಉಡುಪಿಯಲ್ಲಿ ಲಾಕ್ಡೌನ್ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಡಿ.ಸಿ ಜಗದೀಶ್ ಹೇಳಿದ್ದಾರೆ.
ಉಡುಪಿ ಲಾಕ್ಡೌನ್ ಬಗ್ಗೆ ನಾಳೆ ತೀರ್ಮಾನ: ಜಿಲ್ಲಾಧಿಕಾರಿ ಜಗದೀಶ್ - tomorrow will announce about Udupi lockdown decision
ಲಾಕ್ಡೌನ್ ಆದೇಶ ಹೊರಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದಾರೆ. ಆಯಾ ಜಿಲ್ಲೆಗಳ ಜಿಲ್ಲಾಡಳಿತವೇ ಲಾಕ್ಡೌನ್ ಬಗ್ಗೆ ನಿರ್ಣಯ ಕೈಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಜಗದೀಶ್
ನಾಳೆ ಬೆಳಿಗ್ಗೆ ಉಡುಪಿಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಯಲಿದೆ. ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಅಂತಿಮ ನಿರ್ಣಯಕ್ಕೆ ಬರಲಿದ್ದೇವೆ. ಮುಖ್ಯಮಂತ್ರಿಗಳು ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಈ ಅಧಿಕಾರ ನೀಡಿದ್ದಾರೆ. ಆಯಾ ಜಿಲ್ಲೆಗಳ ಜಿಲ್ಲಾಡಳಿತವೇ ಲಾಕ್ಡೌನ್ ಬಗ್ಗೆ ನಿರ್ಣಯ ಕೈಗೊಳ್ಳಲಿವೆ. ನಾಳೆ ಲಾಕ್ಡೌನ್ ಸಾಧಕ-ಬಾಧಕದ ಬಗ್ಗೆ ಚರ್ಚೆ ಮಾಡಲಿದ್ದೇವೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.