ಉಡುಪಿ: ಮೂರು ದಿನಗಳ ಹಿಂದೆ ಮಲ್ಪೆ ಬೀಚ್ನಲ್ಲಿ ಸಮುದ್ರದ ಅಲೆಗಳ ಮಧ್ಯೆ ಸಿಲುಕಿದ್ದ ಪ್ರವಾಸಿಗರೊಬ್ಬರನ್ನು ರಕ್ಷಿಸಿರುವ ವೀಡಿಯೋ ವೈರಲ್ ಆಗಿದೆ.
ಸಮುದ್ರದಲ್ಲಿ ಯುವಕನ ಪರದಾಟ: ಜೀವದ ಹಂಗು ತೊರೆದು ಪ್ರಾಣ ರಕ್ಷಣೆ ವೀಡಿಯೊ ವೈರಲ್ - undefined
ಸಮುದ್ರದ ಅಲೆಗಳ ಮಧ್ಯೆ ಸಿಲುಕಿದ್ದ ಯುವಕನನ್ನ ಮಲ್ಪೆಯ ಜೀವ ರಕ್ಷಕ ತಂಡದ ಮಧು ಎಂಬವರು ರಕ್ಷಣೆ ಮಾಡಿದ್ದಾರೆ.
![ಸಮುದ್ರದಲ್ಲಿ ಯುವಕನ ಪರದಾಟ: ಜೀವದ ಹಂಗು ತೊರೆದು ಪ್ರಾಣ ರಕ್ಷಣೆ ವೀಡಿಯೊ ವೈರಲ್](https://etvbharatimages.akamaized.net/etvbharat/prod-images/768-512-3572624-thumbnail-3x2-udp.jpg)
ಜೀವದ ಹಂಗು ತೊರೆದು ಪ್ರಾಣ ರಕ್ಷಣೆ
ಜೀವದ ಹಂಗು ತೊರೆದು ಪ್ರಾಣ ರಕ್ಷಣೆ
ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೆ ಭದ್ರಾವತಿ ಮೂಲದ ಯುವಕರ ತಂಡ ನೀರಿಗಿಳಿದಿದೆ. ಈ ಸಂದರ್ಭದಲ್ಲಿ ಒಬ್ಬ ಯುವಕ ಅಲೆಗಳ ಮಧ್ಯೆ ಸಿಕ್ಕಿ ಹಾಕಿಕೊಂಡಿದ್ದ. ಈ ವೇಳೆ ಮಲ್ಪೆಯ ಜೀವ ರಕ್ಷಕ ತಂಡದ ಮಧು ಎಂಬವರು ಯುವಕನನ್ನು ರಕ್ಷಿಸಿದ್ದಾರೆ.
ಕೆಲ ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆ ಬಿರುಸುಗೊಂಡು ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಕಡಲಿಗೆ ಇಳಿಯದಂತೆ ಸೂಚನೆ ನೀಡಿದ್ದರೂ ಲೆಕ್ಕಿಸದೆ ಕೆಲ ಪ್ರವಾಸಿಗರು ನೀರಿಗಿಳಿಯುವ ದುಸ್ಸಾಹಸ ಮಾಡುತ್ತಿದ್ದಾರೆ.