ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಶಾಸಕ ರಘುಪತಿ ಭಟ್ ಭೇಟಿ ನೀಡಿ, ಶ್ರೀಗಳ ಆರೋಗ್ಯ ವಿಚಾರಿಸಿದರು.
ಪೇಜಾವರ ಶ್ರೀಗಳು ಚೇತರಿಸಿಕೊಳ್ಳುತ್ತಿದ್ದಾರೆ.. ಶಾಸಕ ರಘುಪತಿ ಭಟ್ - ಮಣಿಪಾಲದ ಕೆ.ಎಂಸಿ ಆಸ್ಪತ್ರೆಯಲ್ಲಿ ಪೇಜಾವರ ಶ್ರೀಗಳಿಗೆ ಚಿಕಿತ್ಸೆ
ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಶಾಸಕ ರಘುಪತಿ ಭಟ್ ಭೇಟಿ ನೀಡಿ, ಶ್ರೀಗಳ ಆರೋಗ್ಯ ವಿಚಾರಿಸಿದರು.
ಈ ವೇಳೆ ಮಾತನಾಡಿದ ಅವರು, ಪೇಜಾವರ ಶ್ರೀಗಳು ಪವಾಡ ಪುರುಷರು. ಎಷ್ಟೋ ಬಾರಿ ಅಪಘಾತಗಳಾದಾಗಲೂ ಶ್ರೀಗಳಿಗೆ ಏನೂ ಆಗಿಲ್ಲ. ಈಗಲೂ ಶ್ರೀಗಳಿಗೆ ಏನೂ ಆಗಲ್ಲ ಎಂದರು. ದೇಶಾದ್ಯಂತ ಭಕ್ತರು ಶ್ರೀಗಳು ಗುಣಮುಖರಾಗುವಂತೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಭಕ್ತರು ಭೇಟಿ ಕೊಡುವುದರಿಂದ ಶ್ವಾಶನಾಳಕ್ಕೆ ಸೋಂಕು ತಗಲುವ ಸಾಧ್ಯತೆಯಿದೆ. ಆಸ್ಪತ್ರೆಗೆ ಭೇಟಿ ನೀಡುವ ಬದಲು ಇದ್ದಲ್ಲಿಂದಲೇ ಪ್ರಾರ್ಥನೆ ಮಾಡಿ ಎಂದರು. ನಾವೆಲ್ಲರೂ ದೂರದಿಂದಲೇ ನೋಡಿ ಪ್ರಾರ್ಥಿಸಿದ್ದೇವೆ ಎಂದು ಹೇಳಿದರು.
ನಾಳೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಶ್ರೀಗಳ ಆರೋಗ್ಯ ವಿಚಾರಿಸಲು ಬರುತ್ತಾರೆ. ಹಾಗೆಯೇ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬರುವ ಸಾಧ್ಯತೆಯಿದೆ ಎಂದರು. ಶ್ರೀಗಳ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿಸದಂತೆ ವಿನಂತಿಸಿಕೊಂಡರು.
TAGGED:
ಶಾಸಕ ರಘುಪತಿ ಭಟ್ ಹೇಳಿಕೆ