ಕರ್ನಾಟಕ

karnataka

ETV Bharat / state

ಉಡುಪಿಯಲ್ಲಿ ಮತ್ತೆರಡು ಕೊರೊನಾ ಪಾಸಿಟಿವ್ ಪ್ರಕರಣ: ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ.. - Minister Basavaraja Bommai latest news

ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಿಗೇ ಉಡುಪಿಯಲ್ಲಿ ಮತ್ತೆರಡು ಪ್ರಕರಣಗಳು ಪತ್ತೆಯಾಗಿವೆ.

Two corona posotive case in Udupi
ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ.

By

Published : Mar 29, 2020, 7:04 PM IST

ಉಡುಪಿ: ಜಿಲ್ಲೆಯಲ್ಲಿ ಮತ್ತೆರಡು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ.
ಈ ಬಗ್ಗೆ ಫೇಸ್ ಬುಕ್ ವಿಡಿಯೋದಲ್ಲಿ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಮೂವರು ಪಾಸಿಟಿವ್ ರೋಗಿಗಳಿದ್ದಾರೆ. ಪಾಸಿಟಿವ್ ಉಳ್ಳವರ ಪ್ರಾಥಮಿಕ ಸಂಪರ್ಕವನ್ನು ಟ್ರ್ಯಾಕ್​ ಮಾಡಿದ್ದೇವೆ. ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

ಇನ್ನು ಪ್ರಾಥಮಿಕ ಸಂಪರ್ಕದಲ್ಲಿ ಇದ್ದ ಎಲ್ಲರನ್ನೂ ಕ್ವಾರಂಟೈನ್​ನಲ್ಲಿ ಇಡಲಾಗಿದ್ದು, ಎಲ್ಲಾ ಮುನ್ನೆಚ್ಚರಿಕಾ ಕ್ರಮ ಅನುಸರಿಸಿದ್ದೇವೆ ಎಂದು ತಿಳಿಸಿದ್ದಾರೆ. ಆದ್ರೆ ಜಿಲ್ಲಾಡಳಿತ ಇನ್ನು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ.

ABOUT THE AUTHOR

...view details