ಉಡುಪಿ: ಗಂಗೊಳ್ಳಿಯಲ್ಲಿ ಎರಡು ಅಂಗಡಿಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಅಕಸ್ಮಿಕ ಅಗ್ನಿ ಅವಘಡ: ಎರಡು ಅಂಗಡಿಗಳು ಭಸ್ಮ - ಗಂಗೊಳ್ಳಿ ಅಗ್ನಿ ಅವಘಡ
ಉಡುಪಿ ಜಿಲ್ಲೆಯ ಗಂಗೊಳ್ಳಿ ಎಂಬಲ್ಲಿ ಅಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಎರಡು ಅಂಗಡಿಗಳು ಸುಟ್ಟು ಭಸ್ಮವಾದ ಘಟನೆ ಜರುಗಿದೆ. ಈ ವೇಳೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ನಾಶವಾಗಿವೆ.
ಅಕಸ್ಮಿಕ ಅಗ್ನಿ ಅವಘಡ
ಗಂಗೊಳ್ಳಿ ನೀರಿನ ಟ್ಯಾಂಕ್ ಬಳಿ ಇರುವ ಜಿ. ದಿನೇಶ್ ನಾಯಕ್ ಮತ್ತು ಜಿ. ಪದ್ಮನಾಭ್ ನಾಯಕ್ ಎಂಬುವರ ಅಂಗಡಿಗೆ ಸೋಮವಾರ ರಾತ್ರಿ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಎರಡೂ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಲಕ್ಷಾಂತರ ರೂಪಾಯಿಯ ಸೊತ್ತುಗಳು ಸುಟ್ಟು ಕರಕಲಾಗಿದ್ದು, ಸ್ಥಳಕ್ಕೆ ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.