ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 889ಕ್ಕೆ ಏರಿಕೆಯಾಗಿದ್ದು, ನಿನ್ನೆ ಒಂದೇ ದಿನ 121 ಕೇಸ್ಗಳು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಕೊರೊನಾರ್ಭಟ: ಪ್ರಕರಣಗಳ ಸಂಖ್ಯೆ 889ಕ್ಕೆ ಏರಿಕೆ - corona
ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 889ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಜಗದೀಶ್
ನಿನ್ನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯದ್ದಾಗಿದೆ. ಸದ್ಯ ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಒಂದೇ ದಿನ 101 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಯಾವ ರೋಗಿಗಳ ಪರಿಸ್ಥಿತಿಯೂ ಗಂಭೀರವಾಗಿಲ್ಲ. ಈ ತನಕ ಯಾರಿಗೂ ವೆಂಟಿಲೇಟರ್ ಬಳಕೆ ಮಾಡಿಲ್ಲ ಎಂಬುದು ಸಮಾಧಾನಕರ ಸಂಗತಿ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
Last Updated : Jun 7, 2020, 2:52 PM IST