ಉಡುಪಿ:ಮಣಿಪಾಲ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಇರುವ ಶಂಕೆ ವ್ಯಕ್ತವಾಗಿದೆ.
ಮಣಿಪಾಲದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಶಂಕೆ - ಮಣಿಪಾಲದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಶಂಕೆ
ಅಮೆರಿಕ ಮತ್ತು ಕುವೈಟ್ನಿಂದ ಉಡುಪಿಗೆ ಹಿಂತಿರುಗಿರುವ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ವೈರೆಸ್ ಇರುವ ಶಂಕೆ ವ್ಯಕ್ತವಾಗಿದ್ದು, ಅವರನ್ನ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿ: ಮಣಿಪಾಲದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಶಂಕೆ
ಈ ಇಬ್ಬರೂ ವಿದ್ಯಾರ್ಥಿಗಳು ಅಮೆರಿಕ ಮತ್ತು ಕುವೈಟ್ನಿಂದ ಬಂದಿದ್ದು, ಕೊರೊನಾದ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಗಳಿಗೆ ಐಸೋಲೇಟೆಡ್ ವಾರ್ಡ್ನಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಉಡುಪಿ ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡಾ ಈ ಬಗ್ಗೆ ಮಾಹಿತಿ ನೀಡಿದ್ದು, ರಕ್ತದ ಮಾದರಿಯನ್ನ ಬೆಂಗಳೂರಿಗೆ ರವಾನಿಸಲಾಗಿದೆ. ಎರಡು ದಿನದಲ್ಲಿ ವರದಿ ಬರಲಿದ್ದು, ನಂತರ ಕೊರೊನಾ ಬಗ್ಗೆ ಗೊತ್ತಾಗಲಿದೆ ಎಂದಿದ್ದಾರೆ. ಇನ್ನು ವಿದ್ಯಾರ್ಥಿಗಳ ಮೂಲದ ಬಗ್ಗೆ ವೈದ್ಯರು ಗೌಪ್ಯತೆ ಕಾಪಾಡಿಕೊಂಡಿದ್ದಾರೆ.