ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣ ದಿನೇ ದಿನೆ ಹೆಚ್ಚುತ್ತಿದ್ದು, ಈವರೆಗೆ ಇಬ್ಬರು ಸಾವನ್ನಪ್ಪಿದ್ದಾರೆ. ನಿನ್ನೆ ಜಿಲ್ಲೆಯಲ್ಲಿ 40 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಈ ಮಧ್ಯೆ ಇಬ್ಬರು ಸೋಂಕಿತರ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಇಬ್ಬರು ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ಉಡುಪಿಯಲ್ಲಿ ಇಬ್ಬರು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ ಈವರೆಗೆ ಒಟ್ಟು 1,179 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, 1,053 ಜನ ಈಗಾಗಲೇ ಗುಣಮುಖರಾಗಿದ್ದಾರೆ. ಸದ್ಯ 126 ಜನರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ಯಿದ್ದಾರೆ.
ಉಳಿದಂತೆ 772 ಜನರು ಮನೆಗಳಲ್ಲಿ , 73 ಮಂದಿ ಐಸೋಲೇಷನ್ ವಾರ್ಡ್ಗಳಲ್ಲಿ ಕ್ವಾರಂಟೈನ್ನಲ್ಲಿದ್ದಾರೆ. 106 ಮಾದರಿಗಳನ್ನು ಸಂಗ್ರಹಿಸಲಾಗಿದ್ದು, 266 ಮಾದರಿಗಳ ವರದಿಗಾಗಿ ಆರೋಗ್ಯ ಇಲಾಖೆ ಕಾಯುತ್ತಿದೆ.