ಕರ್ನಾಟಕ

karnataka

ETV Bharat / state

ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ, ಜನ ಎಚ್ಚರಿಕೆಯಿಂದ ಇರಿ : ಉಡುಪಿ ಜಿಲ್ಲಾಧಿಕಾರಿ - ಉಡುಪಿ ಕೋವಿಡ್ ಪ್ರಕರಣ

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಆತಂಕ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಲಭ್ಯವಿರುವ ವೈದ್ಯಕೀಯ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದ ಅವರು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.

Udupi DC explains about Covid cases
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

By

Published : Apr 24, 2021, 8:10 AM IST

ಉಡುಪಿ : ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ದಾಖಲಾದ ಪ್ರಕರಣಗಳ ಪಾಸಿಟಿವ್ ರೇಟ್ ನೋಡಿದರೆ ಶೇ. 10.50 ಕ್ಕೆ ಏರಿಕೆಯಾಗಿದೆ. ಈ ಹಿಂದೆ ರೋಗ ಲಕ್ಷಣಗಳುಳ್ಳ ಪ್ರಕರಣಗಳ ಸಂಖ್ಯೆ ಕೇವಲ ಶೇ.0.5 ರಷ್ಟು ಇತ್ತು. ಈಗ ಅದು ಶೇ. 25 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

ಓದಿ : ಉಡುಪಿಯಲ್ಲಿ ಆಮ್ಲಜನಕದ ಕೊರತೆಯಿಲ್ಲ; ಡಿಸಿ ಜಗದೀಶ್‌ ಸ್ಪಷ್ಟನೆ

ಉಡುಪಿ ಜಿಲ್ಲೆಯಲ್ಲಿ ಹಾಸಿಗೆಗಳ ಲಭ್ಯತೆಯ ವಿವರ ನೀಡಿದ ಜಿಲ್ಲಾಧಿಕಾರಿ, ಒಟ್ಟು 1,109 ಆಕ್ಸಿಜನ್ ಸಹಿತ ಬೆಡ್​ಗಳಿದ್ದು, ಈ ಪೈಕಿ 1,060 ಬೆಡ್​ಗಳು ಖಾಲಿ ಇವೆ. 146 ಐಸಿಯು ಬೆಡ್​ಗಳಲ್ಲಿ ಕೇವಲ 67 ಮಾತ್ರ ಬಾಕಿ ಉಳಿದಿವೆ. ಹೆಚ್​​ಡಿಯು ಬೆಡ್​ಗಳು 74 ಮತ್ತು ವೆಂಟಿಲೇಟರ್ ಅಳವಡಿಸಲಾದ 88 ಬೆಡ್​ಗಳು ಖಾಲಿ ಇವೆ ಎಂದು ಮಾಹಿತಿ ನೀಡಿದ್ದಾರೆ.

ರೋಗಲಕ್ಷಣ ಕಂಡು ಬಂದ ತಕ್ಷಣ ಕೋವಿಡ್ ಪರೀಕ್ಷೆ ಮಾಡಿಕೊಳ್ಳದಿದ್ದರೆ ಮುಂದಿನ ವಾರಗಳಲ್ಲಿ ಬೆಡ್ ಕೊರತೆಯಾಗುವ ಅಪಾಯ ಇದೆ ಎಂದು ಜನತೆಯನ್ನು ಎಚ್ಚರಿಸಿದ್ದಾರೆ.

ABOUT THE AUTHOR

...view details