ಉಡುಪಿ: 'ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ' ಎಂಬ ವಿನೂತನ ಕಾರ್ಯಕ್ರಮದ ಹಿನ್ನೆಲೆ ಎಲ್ಲಾ ಜಿಲ್ಲೆಗಳಲ್ಲಿ ಡಿಸಿಗಳು ಗ್ರಾಮ ವಾಸ್ತವ್ಯ ಹೂಡುವಂತೆ ಸೂಚಿಸಿದ ಹಿನ್ನೆಲೆ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಕಾಪು ತಾಲೂಕು ನಂದಿಕೂರು ಗ್ರಾಮದಲ್ಲಿ ವಾಸ್ತವ್ಯ ಹೂಡಿ, ರಾತ್ರಿ ವೇಳೆ ಸಹ ಗ್ರಾಮಸ್ಥರ ಕಷ್ಟ ಆಲಿಸಿದರು.
ರಾತ್ರಿ ವೇಳೆಯೂ ಗ್ರಾಮಸ್ಥರ ಕಷ್ಟ ಆಲಿಸಿದ ಉಡುಪಿ ಜಿಲ್ಲಾಧಿಕಾರಿ
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಶನಿವಾರ ನಂದಿಕೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಗ್ರಾಮಸ್ಥರ ಸಮಸ್ಯೆ ಆಲಿಸಿದರು.
ಉಡುಪಿ ಡಿಸಿ ಜಿ.ಜಗದೀಶ್
ಗ್ರಾಮ ವಾಸ್ತವ್ಯದ ಭಾಗವಾಗಿ ಮೊದಲು ಸ್ಥಳೀಯ ನಾಲ್ಕೂರು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ನಂದಿಕೂರು ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ನಂತರ ಪಾಠ, ಪಠ್ಯೇತರ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಜೊತೆಗೆ ವಿದ್ಯಾರ್ಥಿಗಳು ಗ್ರಾಮಸ್ಥರು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಶಾಲೆಯಲ್ಲೇ ರಾತ್ರಿ ಸಸ್ಯಾಹಾರಿ ಊಟ ಸವಿದು ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸಿದರು. ಜೊತೆಗೆ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು.
Last Updated : Feb 21, 2021, 7:32 AM IST