ಉಡುಪಿ:ಜಿಲ್ಲೆಯಲ್ಲಿ ಇಂದು ಆರು ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 21 ಕ್ಕೇರಿದೆ.
ಉಡುಪಿ: ಕ್ವಾರಂಟೈನ್ ನಲ್ಲಿದ್ದ ಆರು ಮಂದಿಗೆ ಸೋಂಕು ದೃಢ! - ಉಡುಪಿಯ ಟಿಎಂಎ ಪೈ ಕೋವಿಡ್ ಆಸ್ಪತ್ರೆ
ಉಡುಪಿ ಜಿಲ್ಲೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ಆರು ಮಂದಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆಮಾಡಿದೆ.
ಉಡುಪಿಯ ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಈಗಾಗಲೇ 11 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಓರ್ವ ಕೊರೊನಾ ಸೋಂಕಿತ ಮೃತಪಟ್ಟಿದ್ದರು. ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ ನಲ್ಲಿದ್ದ ಆರು ಮಂದಿಗೆ ಇಂದು ಸೋಂಕು ಇರುವುದು ದೃಢಪಟ್ಟಿದೆ. ಸೋಂಕಿತರನ್ನು ಕ್ವಾರಂಟೈನ್ ಕೇಂದ್ರಗಳಿಂದ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಕ್ವಾರಂಟೈನ್ನಲ್ಲಿ ಇರುವ ಒಬ್ಬ ವೃದ್ಧ, ಯುವಕ ಹಾಗೂ ಕುಂದಾಪುರ ಕ್ವಾರಂಟೈನ್ ಸೆಂಟರ್ ನ ಇಬ್ಬರು ಬಾಲಕಿಯರಿಗೆ ಸೋಂಕು ತಗುಲಿದೆ. ಹೆಬ್ರಿ ತಾಲೂಕಿನಲ್ಲಿ ಕ್ವಾರಂಟೈನ್ ನಲ್ಲಿ ಇರುವ 31 ವರ್ಷ ಹಾಗೂ 47 ವರ್ಷದ ಇಬ್ಬರಲ್ಲಿ ಸೋಂಕು ಕಂಡು ಬಂದಿದೆ. ದುಬೈನಿಂದ ಜಿಲ್ಲೆಗೆ 49 ಜನ ಬಂದಿದ್ದು, ಅವರ ಕೊರೊನಾ ಪರೀಕ್ಷೆ ಇಂದಿನಿಂದ ಹಂತ ಹಂತವಾಗಿ ನಡೆಯಲಿದೆ.