ಉಡುಪಿ :ಕಾಲೇಜಿಗೆ ಹಿಜಾಬ್ ಧರಿಸಿ ಬರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಸಭೆ ನಡೆಸಿ ಹಿಜಾಬ್ ಧರಿಸಿ ತರಗತಿಗಳಿಗೆ ಪ್ರವೇಶವನ್ನು ನಿರಾಕರಿಸಿತ್ತು.
ಆದರೆ, ಇಂದು ಕಾಲೇಜಿನ ಆಡಳಿತ ಮಂಡಳಿಯ ಆದೇಶವನ್ನು ಧಿಕ್ಕರಿಸಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕ್ಯಾಂಪಸ್ಗೆ ಬಂದು ತರಗತಿಗೆ ಹೋಗಲು ಬೇಡಿಕೆ ಇಟ್ಟಿದ್ದಾರೆ.
ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು ಆದರೆ, ಕಾಲೇಜಿನ ಪ್ರಾಂಶುಪಾಲರು ಮಾತ್ರ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಪಾಲ್ಗೊಳ್ಳಲು ಅವಕಾಶ ನಿರಾಕರಿಸಿದ್ದಾರೆ. ಇದೀಗ ಹಿಜಾಬ್ ಹಕ್ಕಿನ ಕುರಿತು ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅಪ್ರಾಪ್ತ ಯುವತಿಯರ ಪರವಾಗಿ ವಿದ್ಯಾರ್ಥಿನಿಯೋರ್ವಳು ಹೈಕೋರ್ಟ್ ಮೆಟ್ಟಿಲೇರಿದ್ದಾಳೆ. ಹಿಜಾಬ್ ಧರಿಸುವುದು ನಮ್ಮ ಮೂಲಭೂತ ಹಕ್ಕು ಎಂದು ಕೋರ್ಟ್ ಮೊರೆ ಹೋಗಿದ್ದಾಳೆ. ಕಾಲೇಜಿಗೆ ಪೊಲೀಸ್ ಇಲಾಖೆಯಿಂದ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಇದನ್ನೂ ಓದಿ: ಹಿಜಾಬ್ ವಿವಾದ : ಕಾಲೇಜು ಆಡಳಿತ ಮಂಡಳಿಯಿಂದ ವಿದ್ಯಾರ್ಥಿನಿಯರಿಗೆ ಖಡಕ್ ಎಚ್ಚರಿಕೆ