ಕರ್ನಾಟಕ

karnataka

ETV Bharat / state

ಕರ್ತವ್ಯಲೋಪ ಆರೋಪ: ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು - Udupi education officer suspended

ಕರ್ತವ್ಯಲೋಪ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಂಜುಳ ಅವರನ್ನು ಅಮಾನತುಗೊಳಿಸಿ ಮಂಗಳೂರಿನ ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

udupi-zone-field-education-officer-suspended
ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಂಜುಳ

By

Published : Apr 7, 2021, 10:56 PM IST

ಉಡುಪಿ:ಕರ್ತವ್ಯಲೋಪ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಂಜುಳಾ ಅವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

ಮಂಜುಳ ಅವರು ಉಡುಪಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮೂಲ ಶಾಲೆಯಿಂದ ಅಗತ್ಯವಿರುವ ಶಾಲೆಗಳಿಗೆ ನಿಯೋಜನೆ ಮಾಡಿ, ಆ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನಿಯಮಗಳಿಗೆ ವಿರುದ್ಧವಾಗಿ ನೇಮಕಾತಿ ಮಾಡಿದ್ದರು ಎಂಬ ಆರೋಪವಿದೆ. ಕಚೇರಿಯ ಕರ್ತವ್ಯ ನಿರ್ವಹಣೆ, ಅತಿಥಿ ಶಿಕ್ಷಕರ ನಿಯೋಜನೆ ಮತ್ತು ಅಕ್ಷರ ದಾಸೋಹ ಕಾರ್ಯಕ್ರಮ ಸರಿಯಾಗಿ ನಿರ್ವಹಿಸದಿರುವ ಆರೋಪವೂ ಇವರ ಮೇಲಿತ್ತು.

ಕಚೇರಿಯ ವಾಹನದ ದುರಸ್ತಿಗೆ ಆರ್​ಟಿಒ ಪೂರ್ವಾನುಮತಿ ಪಡೆಯದೇ ವಾಹನ ದುರಸ್ತಿ ಮಾಡಿಸಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಎರ್ಮಾಳು ಈ ಶಾಲಾ ಮೈದಾನದ 0.1 ಎಕರೆ ಸ್ಥಳವನ್ನು ರಾಷ್ಟ್ರೀಯ ಹೆದ್ದಾರಿಗೆ ನೀಡಿದ್ದ ಕಾರಣ ಪರಿಹಾರದ ಮೊತ್ತ ₹15.03 ಲಕ್ಷ ಖಾತೆಗೆ ಜಮೆಯಾಗಿತ್ತು. ಈ ಮೊತ್ತದಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕೆ ₹8 ಲಕ್ಷ ಹಾಗೂ ಕಾಂಪೌಂಡ್ ನಿರ್ಮಾಣಕ್ಕಾಗಿ ₹ 7,03,184 ಗಳನ್ನು ಶಾಲಾ ಎಸ್.ಡಿ.ಎಂ.ಸಿ ಖಾತೆಗೆ ಪಾವತಿಸಿದ್ದರು. ಇಲ್ಲಿಯೂ ಇಲಾಖೆಯ ನಿಯಮವನ್ನು ಉಲ್ಲಂಘಿಸಿದ್ದರು.

ಕರ್ತವ್ಯ ಲೋಪದ ಆರೋಪಗಳ ಬಗ್ಗೆ ಇಲಾಖಾ ವಿಚಾರಣೆ ಕಾಯ್ದಿರಿಸಿ, ಈ ಕೂಡಲೇ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ರಾಜ್ಯಪಾಲರ ಆದೇಶದನುಸಾರ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಸದ್ಯ ಮಂಜುಳಾ ಅವರನ್ನು ಮಂಗಳೂರಿನ ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಓದಿ:ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಲು ಸರ್ಕಾರ ತಡ ಮಾಡಬಾರದು: ಅನಂತ್ ಸುಬ್ಬರಾವ್

For All Latest Updates

ABOUT THE AUTHOR

...view details