ಹಿರಿಯ ಯಕ್ಷಗಾನ ಕಲಾವಿದ ಮಲ್ಪೆ ವಾಸುದೇವ ಸಾಮಗ ಕೋವಿಡ್ಗೆ ಬಲಿ - ಮಲ್ಪೆ ವಾಸುದೇವ ಸಾಮಗ ಕೋವಿಡ್ ಸೋಂಕಿಗೆ ಮೃತ
ಯಕ್ಷಗಾನದ ತೆಂಕು ಮತ್ತು ಬಡಗು ತಿಟ್ಟಿನಲ್ಲಿ ಖ್ಯಾತರಾಗಿದ್ದ ಮಲ್ಪೆ ವಾಸುದೇವ ಸಾಮಗ ಕೋವಿಡ್ ಸೋಂಕಿಗೆ ಮೃತಪಟ್ಟಿದ್ದಾರೆ.
ಮಲ್ಪೆ ವಾಸುದೇವ ಸಾಮಗ
ಉಡುಪಿ:ಜಿಲ್ಲೆಯ ಹಿರಿಯ ಯಕ್ಷಗಾನ ಕಲಾವಿದ ಮಲ್ಪೆ ವಾಸುದೇವ ಸಾಮಗ ( 71 )ಕೋವಿಡ್ಗೆ ಬಲಿಯಾಗಿದ್ದಾರೆ.
ಯಕ್ಷಗಾನದ ತೆಂಕು ಮತ್ತು ಬಡಗು ತಿಟ್ಟಿನಲ್ಲಿ ಖ್ಯಾತರಾಗಿದ್ದ ಇವರು ಕುಂದಾಪುರ ತಾಲೂಕು ಕೋಟೇಶ್ವರದ ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ.
ಅಲ್ಪಕಾಲಿಕ ಅಸೌಖ್ಯಕ್ಕೆ ಒಳಗಾಗಿದ್ದ ಅವರನ್ನು ಕೋವಿಡ್ ಕಾಡಿತ್ತು. ಯಕ್ಷಗಾನ ರಂಗದ ತಾಳಮದ್ದಳೆ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಇವರು, ಯಕ್ಷಗಾನ ಕ್ಷೇತ್ರದಲ್ಲಿ ವಾಕ್ಪಟುತ್ವದಿಂದ ಜನಮನ್ನಣೆಗೆ ಪಾತ್ರರಾಗಿದ್ದರು.