ಉಡುಪಿ:ಜಿಲ್ಲೆಯಲ್ಲಿಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜಿಲ್ಲೆಯನ್ನು ಭಾಗಶಃ ಬರಪೀಡಿತ ಪ್ರದೇಶ ಎಂದು ಘೋಷಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಜಯಾಮಾಲಾ ಹೇಳಿದ್ದಾರೆ.
ಉಡುಪಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಭಾಗಶ: ಬರಪೀಡಿತವೆಂದು ಘೋಷಣೆ - ನೀರಿನ ಸಮಸ್ಯೆ
126 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇದ್ದು, ಈ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜಾಗುತ್ತಿದೆ ಎಂದು ಅವರು ತಿಳಿಸಿದರು.
126 ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇದ್ದು, ಈ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜಾಗುತ್ತಿದೆ. ಬರ ನಿರ್ವಹಣೆಗಾಗಿ ಇದಾಗಲೇ ನಿಧಿ ಸಂಗ್ರಹವಾಗಿದೆ. ಇದಕ್ಕಾಗಿ ಆಲೋಚಿಸುವ ಅಗತ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ. ಜಿಲ್ಲೆಯಲ್ಲಿ ಬರ ನಿರ್ವಹಣೆಗೆ 33 ಕೋಟಿ ರೂಪಾಯಿ ಅಕೌಂಟ್ನಲ್ಲಿದ್ದು ಯಾವುದೇ ತೊಂದರೆ ಇಲ್ಲ.
ಸಮುದ್ರಕ್ಕೆ ಹರಿಯುವ ನೀರನ್ನು ರೀಚಾರ್ಜ್ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದ್ದು ಅದಕ್ಕಾಗಿ ಸೂಕ್ತ ಕ್ರಮಕ್ಕೆ ಮುಂದಾಗಿದ್ದೇವೆ. ನಗರಪ್ರದೇಶದ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಲ್ಲಾ ಪಂಪ್ ಸೆಟ್ ಕಡಿತ ಮಾಡಲು ಸೂಚಿಸಲಾಗಿದೆ ಎಂದು ಸಚಿವೆ ಜಯಮಾಲಾ ತಿಳಿಸಿದರು.