ಉಡುಪಿ: ಜಿಲ್ಲೆಯಲ್ಲಿ ಕೊರೊನಾ 'ಮಹಾ' ಸ್ಫೋಟವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೆಡಿಪಿ ಸಭೆ ನಡೆಸಿದ್ದಾರೆ.
ಉಡುಪಿಯನ್ನು ಕೊರೊನಾ ಮುಕ್ತ ಮಾಡಲು ಸಕಲ ಪ್ರಯತ್ನ: ಬೊಮ್ಮಾಯಿ - Corona meeting
ಉಡುಪಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಡುವೆ ಉಡುಪಿಯನ್ನು ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಇಂಗಿತ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಸೋಮವಾರ ಮತ್ತೆ 44 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 946ಕ್ಕೆ ತಲುಪಿದೆ. ಒಟ್ಟು ಸೋಂಕಿತರಲ್ಲಿ ಶೇ. 97ರಷ್ಟು ಮಂದಿ ಮಹಾರಾಷ್ಟ್ರದಿಂದ ಬಂದವರು 946ರಲ್ಲಿ 908 ಮಂದಿ ಮಹಾರಾಷ್ಟ್ರದ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ.
ಜಿಲ್ಲೆಯ ಕೇವಲ ಶೇ.1.03ರಷ್ಟು ಅಂದರೆ 13 ಮಂದಿಗೆ ಮಾತ್ರ ಸೋಂಕು ತಗುಲಿದೆ. ಉಳಿದ 933 ಮಂದಿ ಹೊರ ರಾಜ್ಯ ಮತ್ತು ರಾಷ್ಟ್ರಗಳಿಂದ ಬಂದಿದ್ದಾರೆ. ಗುಣಮುಖರಾಗಿ ಬಿಡುಗಡೆಯಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. 10-12 ದಿನಗಳಲ್ಲಿ ಎಲ್ಲ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಲಿದ್ದಾರೆ. ಉಡುಪಿಯನ್ನು ಕೊರೊನಾ ಮುಕ್ತ ಮಾಡಲು ಸಕಲ ಪ್ರಯತ್ನ ಮಾಡಲಾಗುವುದು ಅಂತಾ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.