ಉಡುಪಿ :ಕೋವಿಡ್ ಹೆಚ್ಚಳ ಹಿನ್ನೆಲೆ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೆ ಮಾಡಲಾಗಿದೆ. ಇಂದು ಮಧ್ಯಾಹ್ನ 2 ಗಂಟೆಯ ಬಳಿಕ ಜಿಲ್ಲೆ ಬಹುತೇಕ ಸ್ತಬ್ಧವಾಗಿದೆ.
ಜಿಲ್ಲೆಯಲ್ಲಿ ಎರಡು ಗಂಟೆಯವರೆಗೂ ಅಗತ್ಯ ವಸ್ತುಗಳ ಮಾರಾಟಕ್ಕೆ ಹಾಗೂ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆ ಬಳಿಕ ಬಹುತೇಕ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.