ಕರ್ನಾಟಕ

karnataka

ETV Bharat / state

COVID ಉಲ್ಭಣ.. ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ - udupi corona case

ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶಿಸಿದ್ದಾರೆ.

weekend-curfew-in-udupi-district
ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ

By

Published : Sep 4, 2021, 7:06 AM IST

ಉಡುಪಿ:ಕೋವಿಡ್(COVID) ಪ್ರಕರಣಗಳ ಸಂಖ್ಯೆಯಲ್ಲಿ ರಾಜ್ಯದಲ್ಲೇ ಉಡುಪಿ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಕಳೆದ 14 ದಿನದ ಪಾಸಿಟಿವಿಟಿ ದರವು 1.54 ಇದ್ದು, ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ. ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.

ಈ ಸಂದರ್ಭದಲ್ಲಿ ತುರ್ತು ಮತ್ತು ಅಗತ್ಯ ಸೇವೆಗಳು ಕಾರ್ಯ ನಿರ್ವಹಿಸಲಿವೆ. ಬೆಳಗ್ಗೆ 5ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಆಹಾರ, ದಿನಸಿ, ಹಣ್ಣು, ಮೀನು, ಮಾಂಸ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಮದ್ಯದಂಗಡಿ, ಮದ್ಯದ ಮಳಿಗೆಗಳು ಮಧ್ಯಾಹ್ನ 2ರವರೆಗೆ ತೆರೆದಿರಲಿದ್ದು, ಹೋಟೆಲ್ ರೆಸ್ಟೋರೆಂಟ್​​ಗಳಲ್ಲಿ ಪಾರ್ಸೆಲ್​ಗೆ ಮಾತ್ರ ಅವಕಾಶವಿದೆ. ಮದುವೆ ಶುಭ ಸಮಾರಂಭಗಳಿಗೆ 400 ಜನರಿಗೆ ಅವಕಾಶ ನೀಡಲಾಗಿದೆ.

ಕೇರಳದಿಂದ ಬರುವವರ ಮೇಲೆ ನಿಗಾ:

ಕೇರಳದಿಂದ ಉಡುಪಿಗೆ ಬರುವವರ ಸಂಖ್ಯೆ ಹೆಚ್ಚಿದ್ದು, ಅಂತವರಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ. ಉಡುಪಿಗೆ ಬರುವ 72 ಗಂಟೆ ಮೊದಲು ಕೋವಿಡ್ ಟೆಸ್ಟ್ ಮಾಡಿಸಿರಬೇಕು. ವರದಿ ನೆಗೆಟಿವ್ ಬಂದರೂ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್​ನಲ್ಲಿ ಇರಬೇಕು. ಕ್ವಾರಂಟೈನ್ ಮುಗಿಸಿದ ಬಳಿಕ ಮತ್ತೆ ಟೆಸ್ಟ್ ಮಾಡಿಸಿಕೊಳ್ಳಬೇಕು. ಎರಡು ವ್ಯಾಕ್ಸಿನೇಷನ್ ಮಾಡಿಸಿದ್ದರೂ ನೆಗೆಟಿವ್ ವರದಿ ಕಡ್ಡಾಯವಾಗಿದೆ.

ಹಾಗೆಯೇ ಮಹಾರಾಷ್ಟ್ರದಿಂದ ಬರುವವರೂ ಕೂಡ 72 ಗಂಟೆ ಮುನ್ನ ಟೆಸ್ಟ್ ಮಾಡಿಸಿರುವ ನೆಗೆಟಿವ್​ ವರದಿ ಹೊಂದಿರಬೇಕು. ಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕಾರಂಟೈನ್ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:ಕೆಲಸ ಮಾಡ್ತಿದ್ದ ಅಂಗಡಿಗೇ ಕನ್ನ, ಐಷಾರಾಮಿ ಜೀವನ.. ಇಬ್ಬರು ಖದೀಮರು ಅಂದರ್​

ABOUT THE AUTHOR

...view details