ಉಡುಪಿ: ಎಣ್ಣೆಹೊಳೆಯಲ್ಲಿ 108 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಏತ ನೀರಾವರಿ ಯೋಜನೆ ಸಂಪೂರ್ಣ ವೈಫಲ್ಯ ಕಂಡಿದೆ. ಇದರಿಂದ ಕ್ಷೇತ್ರದ ಜನರಿಗೆ ಸ್ವಲ್ಪವೂ ಪ್ರಯೋಜನವಿಲ್ಲ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿದರು.
ಎಣ್ಣೆಹೊಳೆ ಏತ ನೀರಾವರಿ ಯೋಜನೆ ಅವೈಜ್ಞಾನಿಕ: ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಎಣ್ಣೆಹೊಳೆಯಲ್ಲಿ 108 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಏತ ನೀರಾವರಿ ಯೋಜನೆ ಸಂಪೂರ್ಣ ವೈಫಲ್ಯ ಕಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
"ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಹೆಸರಿನಲ್ಲಿ ಶಾಸಕ ಸುನಿಲ್ ಕುಮಾರ್ ಮತ್ತು ಬಿಜೆಪಿ ಪಕ್ಷದ ಜನಪ್ರತಿನಿಧಿಗಳು ಕಮಿಷನ್ ದಂಧೆಯಲ್ಲಿ ನಿರತರಾಗಿದ್ದಾರೆ. ಅವರಿಗೆ ಜನರ ಸಂಕಷ್ಟ ಗೊತ್ತಿಲ್ಲ. ಹಣ ಮಾಡುವುದೊಂದೇ ಉದ್ದೇಶವಾಗಿದೆ. ಕೊರೊನಾ ಕಿಟ್ ವಿತರಣೆಯಲ್ಲೇ ಹಣ ದೋಚಿದವರು ಕಾಮಗಾರಿಯಲ್ಲಿ ಹಣ ಲೂಟಿ ಮಾಡದೆ ಬಿಡುತ್ತಾರಾ" ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಏತ ನೀರಾವರಿ ಯೋಜನೆಯಿಂದ ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ. ಮಳೆಗಾಲದಲ್ಲಿ ನೀರು ತುಂಬಿ ಮನೆಗಳ ಸಹಿತ ಬೆಳೆಗಳು ಮುಳುಗಡೆಯಾಗುತ್ತದೆ. ಬೇಸಿಗೆಯಲ್ಲೂ ಕೂಡ ಈ ಭಾಗದಲ್ಲಿ ನೀರಿರುವುದಿಲ್ಲ. ಇದೊಂದು ಅವೈಜ್ಞಾನಿಕ ಕಾಮಗಾರಿಯಾಗಿದ್ದು ಕಾರ್ಕಳ ಶಾಸಕರು ಜನರಿಗೆ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.