ಕರ್ನಾಟಕ

karnataka

By

Published : Aug 6, 2021, 1:45 AM IST

ETV Bharat / state

ಉಡುಪಿ: ಕ್ರಿಕೆಟ್ ಆಡುತ್ತಲೇ ಕುಸಿದು ಬಿದ್ದು ಯುವಕ ಸಾವು

ಉಡುಪಿ ಜಿಲ್ಲೆಯಲ್ಲಿ ಯುವಕನೊಬ್ಬ ಕ್ರಿಕೆಟ್ ಆಡುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

boy-dies-of-heart-attack-while-playing-cricket-in-udupi
ಕ್ರಿಕೆಟ್ ಆಡುತ್ತಲೇ ಕುಸಿದು ಬಿದ್ದು ಯುವಕ ಸಾವು

ಉಡುಪಿ:ಕ್ರಿಕೆಟ್ ಆಡುತ್ತಿದ್ದಾಗ ಕುಸಿದು ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಸುಕೇಶ್ ಶೆಟ್ಟಿ (27) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ.

ಉಡುಪಿಯ ನಂದಳಿಕೆ ಗ್ರಾಮದ ಮಾವಿನಕಟ್ಟೆ ಆಟದ ಮೈದಾನದಲ್ಲಿ ಈ ಘಟನೆ ನಡೆದಿದೆ. ಯುವಕ ಬೌಲಿಂಗ್ ಮಾಡುವಾಗ ಕುಸಿದು ಬಿದ್ದಿದ್ದಾನೆ. ತಕ್ಷಣ ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಯುವಕ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:India vs England: ಮಳೆಯಿಂದ 2ನೇ ದಿನದಾಟ ಅಂತ್ಯ, ಭಾರತಕ್ಕೆ ರಾಹುಲ್​ ಆಸರೆ

For All Latest Updates

ABOUT THE AUTHOR

...view details