ಉಡುಪಿ :ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿಸೋಜಾ(35) ಎಂಬುವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿತದ ಚಟ ಹೊಂದಿದ್ದ ನೆರೆಮನೆಯ ಸುಮಾರು 45 ವರ್ಷದ ವ್ಯಕ್ತಿ ಕ್ಷುಲ್ಲಕ ಕಾರಣಗಳಿಗಾಗಿ ಈ ಕೃತ್ಯವೆಸಗಿದ್ದಾನೆ ಎಂದು ತಿಳಿದು ಬಂದಿದೆ.