ಕರ್ನಾಟಕ

karnataka

ETV Bharat / state

ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ: ಭಟ್ಕಳದಲ್ಲಿ ನಾಳೆ ನಿಷೇಧಾಜ್ಞೆ ಜಾರಿ

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಕಟ್ಟೆಚ್ಚರ ಘೋಷಿಸಲಾಗಿದೆ. ಸೂಕ್ಷ್ಮ ಪ್ರದೇಶ ಎಂದು ಪರಿಗಣಿಸಿ ಭಟ್ಕಳದಲ್ಲೂ ನಾಳೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

144 section implemented on Batkal tomorrow
ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ: ಭಟ್ಕಳದಲ್ಲಿ ನಾಳೆ ನಿಷೇಧಾಜ್ಞೆ ಜಾರಿ

By

Published : Aug 4, 2020, 10:02 PM IST

ಭಟ್ಕಳ (ಉ.ಕ):ರಾಮ ಮಂದಿರಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯುವ ಕಾರಣ ತಾಲೂಕಿನಾದ್ಯಂತ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8ರವರೆಗೆ ನಿಷೇಧಾಜ್ಞೆ ಹೊರಡಿಸಲಾಗಿದೆ.

ನಿಷೇಧಾಜ್ಞೆ ಜಾರಿ ಆದೇಶ ಪತ್ರ

ಈ ಬಗ್ಗೆ ತಹಶೀಲ್ದಾರ್ ಎಸ್.ರವಿಚಂದ್ರ ಆದೇಶ ಹೊರಡಿಸಿದ್ದು, ಭಟ್ಕಳ ತಾಲೂಕು ಮತೀಯವಾಗಿ ಮತ್ತು ರಾಜಕೀಯವಾಗಿ ಅತೀ ಸೂಕ್ಷ್ಮ ಪ್ರದೇಶವಾಗಿದೆ. ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಸ್ವಾಗತಿಸಿ ಹಾಗೂ ಬೆಂಬಲಿಸಿ ಬಿಜೆಪಿ ಪಕ್ಷ ಸೇರಿದಂತೆ ಹಿಂದೂಪರ ಸಂಘಟನೆಗಳು ಭಟ್ಕಳ ಶಹರ ಠಾಣೆ ವ್ಯಾಪ್ತಿ, ಭಟ್ಕಳ ಗ್ರಾಮೀಣ ಠಾಣೆ, ಮತ್ತು ಮುರ್ಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ಶ್ರೀರಾಮ ಮಂದಿರ ಹಾಗೂ ಹನುಮ ಮಂದಿರ ಮತ್ತು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಭಜನೆ ಕಾರ್ಯಕ್ರಮಗಳ ಮೂಲಕ ಮೆರವಣಿಗೆ, ಗುಂಪು ಸೇರಿ ಸಿಹಿ ಹಂಚುವ ಕಾರ್ಯಕ್ರಮಗಳು ನಡೆಯುವ ಸಂಭವವಿರುತ್ತದೆ ಎಂದು ತಿಳಿಸಿದ್ದಾರೆ.

SDPI ಪಕ್ಷದ ಪ್ರತಿನಿಧಿಗಳು ಅದೇ ದಿನ ಸಂಜೆ 4.30ಕ್ಕೆ ತಹಶೀಲ್ದಾರರ ಕಾರ್ಯಾಲಯದ ಎದುರು ನಿಂತು ‘ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ತ್ರಿವಳಿ ತಲಾಕ್ ಕಾನೂನು ಬಗ್ಗೆ ಪ್ರತಿಭಟನೆ’ ಮಾಡುವ ಉದ್ದೇಶ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಭಟ್ಕಳವು ಅತಿ ಸೂಕ್ಷ್ಮ ಪ್ರದೇಶವಾಗಿದ್ದು ಹಾಗೂ ಮತೀಯ ಕೋಮುಗಲಭೆಗಳು ಉಂಟಾಗುವ ಸಾಧ್ಯತೆಯ ಹಿನ್ನೆಲೆ ತಾಲೂಕಿನಾದ್ಯಂತ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ನಿಷೇಧಾಜ್ಞೆಯ ಸಮಯದಲ್ಲಿ ಯಾವುದೇ ರೀತಿಯ ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ/ರಾಜಕೀಯ ಸಭೆ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಶಸ್ತ್ರಾಸ್ತ್ರಗಳು, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.

ಭಟ್ಕಳ ತಾಲೂಕಿನಾದ್ಯಂತ ಪಟಾಕಿ ಮಾರಾಟ ಮಾಡುವ ಪರವಾನಿಗೆದಾರರು ಅಂಗಡಿಗಳನ್ನು ಮುಚ್ಚುವುದು ಮತ್ತು ಪಟಾಕಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಈಗಾಗಲೇ ತಾಲೂಕು ಆಡಳಿತದಿಂದ ಅನುಮತಿ ಪಡೆದು ನಡೆಸುತ್ತಿರುವ ಮದುವೆ ಕಾರ್ಯಕ್ರಮಕ್ಕೆ ವಿಧಿಸಿದ ಷರತ್ತುಗಳಿಗೆ ಒಳಪಟ್ಟಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details