ಕಾರವಾರ: ಹಿಜಾಬ್ ವಿವಾದದ ನಡುವೆಯೂ ಜಿಲ್ಲೆಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಶಾಂತಿಯುತವಾಗಿ ನಡೆದಿದ್ದು, 158 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಮೊದಲ ಬಾರಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡ 9,821 ವಿದ್ಯಾರ್ಥಿಗಳ ಪೈಕಿ 9,738 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 83 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಉತ್ತರ ಕನ್ನಡದಲ್ಲಿ ಶಾಂತಿಯುತ ಎಸ್ಎಸ್ಎಲ್ಸಿ ಪರೀಕ್ಷೆ ಇನ್ನು 3 ಮಂದಿ ಪುನಾರಾವರ್ತಿತ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೊದಲ ಬಾರಿಗೆ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡವರ ಪೈಕಿ 10,412 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 75 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯಲ್ಲಿ ಕಾರವಾರ ಸೇರಿದಂತೆ ಕೆಲವೆಡೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದರು ಕೂಡ ಶಾಲಾ ಕಾಂಪೌಂಡ್ ಹೊರ ಭಾಗದಲ್ಲಿಯೇ ಹಿಜಾಬ್ ತೆಗೆದು ಸಮವಸ್ತ್ರದೊಂದಿಗೆ ಪರೀಕ್ಷೆಗೆ ಹಾಜರಾಗಿದ್ದಾರೆ. ಜಿಲ್ಲೆಯಲ್ಲಿ ಪ್ರತಿ ತಾಲೂಕಿಗೆ ಒಂದರಂತೆ ಕೋವಿಡ್ ಕೇಂದ್ರ ಸ್ಥಾಪನೆ ಮಾಡಲಾಗಿತ್ತು. ಪರೀಕ್ಷಾ ಕೊಠಡಿ ಪ್ರವೇಶಿಸುವ ಮುನ್ನ ಮಾಸ್ಕ್ ಹಾಗೂ ಸ್ಯಾನಿಟೈಸಿಂಗ್ ಮಾಡಿಸಿ ಒಳಗೆ ಬಿಡಲಾಯಿತು.
ಕಾರವಾರ ತಾಲೂಕಿನ ಉಳಗಾದ ಶಿವಾಜಿ ಪ್ರೌಢಶಾಲೆ ಹಾಗೂ ಚಿತ್ತಾಕುಲದ ಶಿವಾಜಿ ಕಾಲೇಜಿನಲ್ಲಿನ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಪರೀಕ್ಷಾ ಚಟುವಟಿಕೆಗಳನ್ನು ಪರಿಶೀಲಿಸಿದರು. ಡಿಡಿಪಿಐ ಹರೀಶ ಗಾಂವ್ಕರ್ ಕಾರವಾರ ಶೈಕ್ಷಣಿಕ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ:ಎಸ್ಎಸ್ಎಲ್ಸಿ ಪರೀಕ್ಷೆ: ಹಿಜಾಬ್ ತೆಗೆದಿಟ್ಟು ಎಕ್ಸಾಂ ಬರೆದ ವಿದ್ಯಾರ್ಥಿಗಳು